ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ವತಿಯಿಂದ ಮೈಸೂರು, ಕೊಡಗು, ಚಾಮರಾಜನಗರ, ಮಂಗಳೂರು, ಉಡುಪಿ ಜಿಲ್ಲೆಗಳಿಂದ ಕೊರಗ ಮತ್ತು ಜೇನುಕುರುಬರ ೨೦ ಜನರ ತಂಡ ದೆಹಲಿ ದರ್ಶನ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ರವರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಎಲ್. ಶ್ರೀನಿವಾಸ್, ಉಪನಿರ್ದೇಶಕಿ ಬಿ.ಎಸ್. ಪ್ರಭಾ ಅರಸ್, ಕಾರ್ಯದರ್ಶಿ ಶಿವಲಿಂಗಪ್ರಭುವಾಲಿ, ಸಹಾಯಕ ನಿರ್ದೇಶಕ ಎಚ್. ಶ್ರೀನಿವಾಸ್ ರವರನ್ನು ಕಾಣಬಹುದು.



