Wednesday, May 21, 2025
Google search engine

Homeಅಪರಾಧಫೈನಾನ್ಸ್ ಕಿರುಕುಳಕ್ಕೆ ನದಿಗೆ ಹಾರಿ ಆತ್ಮಹತ್ಯೆ : ತುಂಗಾಭದ್ರಾ ನದಿಯಲ್ಲಿ ಶಿಕ್ಷಕಿಯ ಶವ ಪತ್ತೆ

ಫೈನಾನ್ಸ್ ಕಿರುಕುಳಕ್ಕೆ ನದಿಗೆ ಹಾರಿ ಆತ್ಮಹತ್ಯೆ : ತುಂಗಾಭದ್ರಾ ನದಿಯಲ್ಲಿ ಶಿಕ್ಷಕಿಯ ಶವ ಪತ್ತೆ

ದಾವಣಗೆರೆ : ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ಖಾಸಗಿ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಸರ್ಕಾರಿ ಶಿಕ್ಷಕಿ ಒಬ್ಬರು ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ಶಿಕ್ಷಕಿಯ ಶವ ಪತ್ತೆಯಾಗಿದೆ.

ತುಂಗಭದ್ರಾ ನದಿಗೆ ಹಾರಿ ಶಿಕ್ಷಕಿ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊನ್ನಾಳಿ ತಾಲೂಕಿನಲ್ಲಿ ನಡೆದಿದೆ. ಹೊನ್ನಾಳಿ ನಿವಾಸಿಯಾಗಿದ್ದ ಸರಕಾರಿ ಶಾಲೆಯ ಶಿಕ್ಷಕಿ ಪುಷ್ಪಲತಾ (46) ಆತ್ಮಹತ್ಯೆ ಮಾಡಿಕೊಂಡಂತಹ ಶಿಕ್ಷಕಿ. ಮನೆ ಕಟ್ಟಲು ಖಾಸಗೆ ಮೈಕ್ರೋ ಫೈನಾನ್ಸ್ ಹಾಗೂ ಕೈಗಡ ಸಾಲ ತೆಗೆದುಕೊಂಡಿದ್ದರು. ಖಾಸಗಿ ಫೈನಾನ್ಸ್ ಕಾಟಕ್ಕೆ ಹಾಗೂ ಸಾಲಕ್ಕೆ ಹೆದರಿ ಶಿಕ್ಷಕಿ ಸೂಸೈಡ್ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಹೊನ್ನಾಳಿಯ ಸರ್ಕಾರಿ ಶಾಲೆ ಶಿಕ್ಷಕಿ ಪುಷ್ಪಲತಾ ಅವರು ಭಾನುವಾರ ರಾತ್ರಿಯಿಂದ ಕಾಣೆಯಾಗಿದ್ದರು.ಹೊನ್ನಾಳಿ ಪಟ್ಟಣದ ರಾಘವೇಂದ್ರ ಮಠದ ಸಮೀಪ, ತುಂಗಭದ್ರಾ ನದಿ ದಂಡೆಯ ಬಳಿ ಪುಷ್ಪಲತಾ ಅವರ ಚಪ್ಪಲಿ ದೊರೆತಿವೆ. ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಕುಟುಂಬದವರು ಶಂಕೆ ವ್ಯಕ್ತಪಡಿಸಿದ್ದರು. ಆದರೆ ಪುಷ್ಪಲತಾ ಅವರ ಶವ ಪತ್ತೆಯಾಗಿದೆ.

RELATED ARTICLES
- Advertisment -
Google search engine

Most Popular