Sunday, June 8, 2025
Google search engine

Homeಅಪರಾಧಮಧ್ಯಪ್ರದೇಶದಲ್ಲಿ ಲೋಕಸಭಾ ಅಭ್ಯರ್ಥಿ ನಿಧನ: ಚುನಾವಣೆ ಮುಂದೂಡಿಕೆ

ಮಧ್ಯಪ್ರದೇಶದಲ್ಲಿ ಲೋಕಸಭಾ ಅಭ್ಯರ್ಥಿ ನಿಧನ: ಚುನಾವಣೆ ಮುಂದೂಡಿಕೆ

ಭೋಪಾಲ್: ಮಾಯಾವತಿಯವರ ಬಹುಜನ ಸಮಾಜ ಪಕ್ಷದ ಮಧ್ಯಪ್ರದೇಶ ಬೆತುಲ್ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಅಶೋಕ್ ಭಾಲವಿ ಅವರು ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ.

ಪಕ್ಷದ ಪ್ರಕಾರ, ಭಾಲವಿಗೆ ಎದೆನೋವು ಕಾಣಿಸಿಕೊಂಡ ತಕ್ಷಣ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ ೨೬ ರಂದು ಎರಡನೇ ಹಂತದಲ್ಲಿ ನಡೆಯಬೇಕಿದ್ದ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ.

ಈ ವಿಚಾರವನ್ನು ಬೆತುಲ್ ಡಿಎಂ ನರೇಂದ್ರ ಕುಮಾರ್ ಸೂರ್ಯವಂಶಿ ಖಚಿತಪಡಿಸಿದ್ದಾರೆ. ಅಲ್ಲದೇ ಈ ಬಗ್ಗೆ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದೇವೆ. ಹೀಗಾಗಿ ಏಪ್ರಿಲ್ ೨೬ರಂದು ನಡೆಯಬೇಕಿದ್ದ ಎರಡನೇ ಹಂತದ ಮತದಾನವನ್ನು ಮುಂದೂಡಿದ್ದೇವೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular