Saturday, July 26, 2025
Google search engine

Homeರಾಜ್ಯರಾಜ್ಯದ ಎತ್ತರದ ಬಹುಮಹಡಿ ಕಟ್ಟಡಗಳಿಗೆ 1% ಸೆಸ್ – ಸಂಪುಟದಿಂದ ಹಲವು ಮಹತ್ವದ ನಿರ್ಧಾರಗಳು

ರಾಜ್ಯದ ಎತ್ತರದ ಬಹುಮಹಡಿ ಕಟ್ಟಡಗಳಿಗೆ 1% ಸೆಸ್ – ಸಂಪುಟದಿಂದ ಹಲವು ಮಹತ್ವದ ನಿರ್ಧಾರಗಳು

ಬೆಂಗಳೂರು: ರಾಜ್ಯದ ಎಲ್ಲ ಎತ್ತರದ ಬಹುಮಹಡಿ ಕಟ್ಟಡಗಳಿಗೆ 1% ಸೆಸ್ ವಿಧಿಸಲು ಕರ್ನಾಟಕ ಸಚಿವ ಸಂಪುಟ ತೀರ್ಮಾನಿಸಿದೆ.

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ನೀಡಿದ ಕಾನೂನು ಸಚಿವ ಹೆಚ್.ಕೆ ಪಾಟೀಲ್, ಅಗ್ನಿಶಾಮಕ ದಳದ ಕಾಯ್ದೆ ಅನ್ವಯವಾಗುವ ಬಹುಮಹಡಿ ಕಟ್ಟಡಗಳಿಗೆ 1 % ಸೆಸ್ ವಿಧಿಸಲು ನಿರ್ಧರಿಸಲಾಗಿದೆ. ವಾಣಿಜ್ಯ ಕಟ್ಟಡಗಳು, ಕೈಗಾರಿಕೆಗಳು, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ ಕಟ್ಟಡಗಳು, ಅಪಾರ್ಟ್ಮೆಂಟ್​​ಗಳು ಸೇರಿ ಎತ್ತರದ ಬಹುಮಹಡಿ ಕಟ್ಟಡಗಳಿಗೆ ಸೆಸ್ ವಿಧಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಸಂಪುಟ ಸಭೆಯಲ್ಲಿ ಇನ್ನೂ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರಿನ ಸ್ಪೇಸ್ ಟೆಕ್‌ನಲ್ಲಿ ಉತ್ಕೃಷ್ಟತಾ ಕೇಂದ್ರ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ. ರಾಯಚೂರಿನ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಪೆರಿಫೆರಲ್ ಕ್ಯಾನ್ಸರ್ ಘಟಕ ಸ್ಥಾಪನೆಯೂ ಇತ್ತೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಸಿಬಿ, ಕೆಎಸ್ಸಿಎ ಹಾಗೂ ಡಿಎನ್ಎ ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸಂಪುಟ ಒಪ್ಪಿಗೆ ನೀಡಿದೆ.

ಅದೇ ರೀತಿ, 46 ಜೀವಾವಧಿ ಕೈದಿಗಳಿಗೆ ಸನ್ನಡತೆ ಆಧಾರಿತ ಬಿಡುಗಡೆ ನೀಡಲು ಅನುಮೋದನೆ ದೊರೆತಿದೆ.

RELATED ARTICLES
- Advertisment -
Google search engine

Most Popular