Sunday, September 14, 2025
Google search engine

Homeರಾಜ್ಯರಾಜ್ಯದಲ್ಲಿ ಶೀಘ್ರವೇ 18,000 ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ರಾಜ್ಯದಲ್ಲಿ ಶೀಘ್ರವೇ 18,000 ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ರಾಜ್ಯದಲ್ಲಿ ಶೀಘ್ರವೇ 18 ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುವುದು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೂ ಸಿಇಟಿ ತರಬೇತಿ ನೀಡಲಾಗುವುದು ಎಂದು ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ನಿವೃತ್ತ ಮತ್ತು ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ 25000 ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೂ ಸಿಇಟಿ ದೊರೆಯಬೇಕೆಂಬುದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯಾದ್ಯಂತ 800 ಕೆಪಿಎಸ್ ಹಾಗೂ 5,000 ದ್ವಿಭಾಷಾ ಶಾಲೆ ಮಂಜೂರು ಮಾಡಲಾಗಿದೆ. 18 ಸಾವಿರ ಶಿಕ್ಷಕರನ್ನು ಶೀಘ್ರವೇ ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular