ರಾಯಚೂರು: ಕಲಿಯುಗ ಕಾಮಧೇನು ಎಂದೇ ಖ್ಯಾತಿ ಪಡೆದಿರುವ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಜೂನ್ ತಿಂಗಳ 21 ದಿನಗಳ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಒಟ್ಟು ₹3.72 ಕೋಟಿ ಕಾಣಿಕೆ ಸಂಗ್ರಹವಾಗಿದೆ.
ಭಕ್ತರು ಅಪಾರ ಭಕ್ತಿಯಿಂದ ನೀಡಿದ ಕಾಣಿಕೆಯಲ್ಲಿ ₹3,61,40,030 ಕರೆನ್ಸಿ ನೋಟುಗಳು ಹಾಗೂ ₹11,02,500 ಮೌಲ್ಯದ ನಾಣ್ಯಗಳು ಸೇರಿವೆ. ಜೊತೆಗೆ 67 ಗ್ರಾಂ ಚಿನ್ನ ಮತ್ತು 511 ಗ್ರಾಂ ಬೆಳ್ಳಿಯನ್ನೂ ಭಕ್ತರು ಅರ್ಪಿಸಿದ್ದಾರೆ.
ಹುಂಡಿ ಎಣಿಕೆ ಕಾರ್ಯದಲ್ಲಿ ಮಠದ ಸಿಬ್ಬಂದಿ, ಭಜನಾ ಮಂಡಳಿಯ ಸದಸ್ಯರು ಹಾಗೂ ಕರಸೇವಕರು ಪಾಲ್ಗೊಂಡಿದ್ದರು. ಮುಜರಾಯಿ ಇಲಾಖೆ ಮತ್ತು ಮಠದ ಅಧಿಕಾರಿಗಳು ಎಣಿಕೆ ಪ್ರಕ್ರಿಯೆಯ ಮೇಲ್ವಿಚಾರಣೆ ನಡೆಸಿದರು.



