Friday, May 23, 2025
Google search engine

Homeಅಪರಾಧಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಿಸಿ ಮಾರಾಟ ಮಾಡುತ್ತಿದ್ದ 4 ಮಂದಿ ಬಂಧನ

ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಿಸಿ ಮಾರಾಟ ಮಾಡುತ್ತಿದ್ದ 4 ಮಂದಿ ಬಂಧನ

ಮಂಗಳೂರು (ದಕ್ಷಿಣ ಕನ್ನಡ): ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎಯನ್ನು ಸಾಗಿಸಿ ಮಾರಾಟ ಮಾಡುತ್ತಿದ್ದ ನಾಲ್ಕು ಮಂದಿಯನ್ನು ಬಂಧಿಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳಿಂದ 270 ಗ್ರಾಂ ಎಂಡಿಎಂಎ ಯನ್ನು ವಶಪಡಿಸಿಕೊಂಡಿದ್ದಾರೆ.

ನಗರದ ಹೊರವಲಯದ ದೇರಳಕಟ್ಟೆಯ ಪರಿಸರದಲ್ಲಿ ಕಾರಿನಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಬಿಜೈಯ ಅಮೀನ್ ಯಾನೆ ರಾಫಿ (23), ಅಡ್ಡೂರಿನ ಸಿನಾನ್ ಯಾನೆ ಅಬ್ದುಲ್ಲಾ (23), ಬಂದರ್ ಜೆಎಂ ರಸ್ತೆಯ ನೌಮಾನ್(22), ಬೋಳಿಯಾರ್‌ನ ಕಂಡಿಮಾರ್‌ನ ಸಫೀಲ್(23)ರನ್ನು ಬಂಧಿಸಿದ್ದಾರೆ.

ಆರೋಪಿಗಳ ಪೈಕಿ ಅಮೀನ್ ಯಾನೆ ರಾಫಿ ಎಂಬಾತನ ವಿರುದ್ಧ 2021ರಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿದೆ.

ಆರೋಪಿಗಳಿಂದ 6,50,000 ಲಕ್ಷ ರೂ. ಮೌಲ್ಯದ 270 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 4 ಮೊಬೈಲ್ ಫೋನ್‌ಗಳು, ಕಾರು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 14,85,500 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular