Sunday, July 12, 2026
Google search engine

Homeಅಪರಾಧಅಕ್ರಮವಾಗಿ ಸಂಗ್ರಹಿಸಿದ್ದ 450 ಕೆಜಿ ಶ್ರೀಗಂಧ ಜಪ್ತಿ : ಬಾಗಲಕೋಟೆಯಲ್ಲಿ ಭರ್ಜರಿ ಕಾರ್ಯಾಚರಣೆ

ಅಕ್ರಮವಾಗಿ ಸಂಗ್ರಹಿಸಿದ್ದ 450 ಕೆಜಿ ಶ್ರೀಗಂಧ ಜಪ್ತಿ : ಬಾಗಲಕೋಟೆಯಲ್ಲಿ ಭರ್ಜರಿ ಕಾರ್ಯಾಚರಣೆ

ಬಾಗಲಕೋಟೆ : ಮಾರಾಟಕ್ಕಾಗಿ ಅಕ್ರಮವಾಗಿ ಕತ್ತರಿಸಿ ಸಂಗ್ರಹಿಸಿಡಲಾಗಿದ್ದ ಬರೋಬ್ಬರಿ 450 ಕೆಜಿ ಶ್ರೀಗಂಧದ ಕಟ್ಟಿಗೆಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದು, ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಶ್ರೀಗಂಧವನ್ನು ವಶಪಡಿಸಿಕೊಡಿದ್ದಾರೆ.

ಯಡಹಳ್ಳಿಯ ಚಿಂಕಾರ ವನ್ಯಜೀವಿ ಧಾಮದ ಅರಣ್ಯ ಪ್ರದೇಶ ಹಾಗೂ ಅಮಲಝರಿ ಗ್ರಾಮದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಜಂಟಿ ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಶ್ರೀಗಂಧದ ಮರಗಳನ್ನು ಕಡಿದು ಅಕ್ರಮವಾಗಿ ಸಾಗಿಸಲು ಸಿದ್ಧಪಡಿಸಿದ್ದ ಅಡಗುತಾಣದ ಮೇಲೆ ದಾಳಿ ನಡೆಸಿದರು.

ಅರಣ್ಯ ಪ್ರದೇಶದಲ್ಲಿದ್ದ ಬೆಲೆಬಾಳುವ ಶ್ರೀಗಂಧದ ಮರಗಳನ್ನು ಕಡಿದು, ತುಂಡುಗಳಾಗಿ ಮಾಡಿ ಬೇರೆ ರಾಜ್ಯಗಳಿಗೆ ಸಾಗಿಸಲು ಆರೋಪಿಗಳು ಸಂಚು ರೂಪಿಸಿದ್ದರು ಎನ್ನಲಾಗಿದೆ. ಅಕ್ರಮ ಸಾಗಣೆ ಜಾಲದ ಹಿಂದೆ ಇನ್ನಷ್ಟು ಮಂದಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ಮುಂದುವರಿದಿದೆ.

ಈ ಕಾರ್ಯಾಚರಣೆ ಬಾಗಲಕೋಟೆ ಉಪ ಅರಣ್ಯ ಸಂರಕ್ಷಣಾಧಿಕಾರಿ (DCF) ಸ್ವಪ್ನಿಲ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಪ್ರದೀಪ ರಾಠೋಡ ಅವರ ನೇತೃತ್ವದಲ್ಲಿ ನಡೆದಿದೆ. ಬೀಳಗಿ ವಲಯ ಅರಣ್ಯಾಧಿಕಾರಿ (RFO) ಅಮೃತ ಗಂಡೋಸಿ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಸದ್ಯ ಆರೋಪಿಗಳನ್ನು ವಶಕ್ಕೆ ಪಡೆದಿರುವ ಅರಣ್ಯ ಇಲಾಖೆ ಅಧಿಕಾರಿಗಳು, ಅಕ್ರಮ ಶ್ರೀಗಂಧ ಸಾಗಣೆ ಜಾಲದ ಪ್ರಮುಖ ಆರೋಪಿಗಳ ಪತ್ತೆಗೆ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.

RELATED ARTICLES
- Advertisment -
Google search engine

Most Popular