ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಹೆಚ್ಚುವರಿ 5 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು, ಹಲವೆಡೆ ರಸಗೊಬ್ಬರ ಕೊರತೆ ಉಂಟಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಅನುಮತಿ ಪಡೆದು ಜಿಲ್ಲಾ ಸಚಿವರಿಗೆ ಮಾಹಿತಿ ನೀಡಿದ್ದೇವೆ. ರಸಗೊಬ್ಬರ ಕುರಿತು ಡಿಸಿಗಳ ಜೊತೆಗೆ ಮಾತುಕತೆ ನಡೆಸಲಾಗುತ್ತಿದೆ. ರಸಗೊಬ್ಬರ ಕೊರತೆ ಉಂಟಾಗಿದೆ.
ಕೇಂದ್ರದಿಂದ 87 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ಬಾಕಿ ಇದೆ. ಕಳೆದ ವರ್ಷ ಹೆಚ್ಚುವರಿಯಾಗಿ 3 ಲಕ್ಷ ಮೆಟ್ರಿಕ್ ಟನ್ ಬಳಕೆಯಾಗುತ್ತಿದೆ. ಯೂರಿಯಾ, ನ್ಯಾನೋ ಯೂರಿಯಾದಲ್ಲಿ ಯಾವುದೇ ವ್ಯತ್ಯಸವಿಲ್ಲ. ರೈತರು ಮುಂದೆ ಸಿಗಲ್ಲ ಎಂಬ ಕಾರಣಕ್ಕೆ ಸ್ಟಾಕ್ ಮಾಡಿಕೊಳ್ಳಬಾರದು ಎಂದರು.
ರಾಜ್ಯದಲ್ಲಿ ಈ ಬಾರಿ ಹೆಚ್ಚುವರಿ 5 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಹೀಗಾಗಿ ಗೊಬ್ಬರ ಸ್ಪಲ್ಪ ಕೊರತೆ ಉಂಟಾಗಿದೆ ಎಂದು ತಿಳಿಸಿದ್ದಾರೆ.