Tuesday, March 10, 2026
Google search engine

HomeUncategorizedರಾಷ್ಟ್ರೀಯಬೆಂಗಳೂರು ಟ್ರಾಫಿಕ್ ಕುರಿತು ರೇವಂತ್ ರೆಡ್ಡಿ ವ್ಯಂಗ್ಯ

ಬೆಂಗಳೂರು ಟ್ರಾಫಿಕ್ ಕುರಿತು ರೇವಂತ್ ರೆಡ್ಡಿ ವ್ಯಂಗ್ಯ

ಹೈದರಾಬಾದ್ : ಐಟಿ ಸಿಟಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಈಗ ನೆರೆರಾಜ್ಯದ ರಾಜಕೀಯ ಅಖಾಡದಲ್ಲೂ ಸದ್ದು ಮಾಡುತ್ತಿದೆ. ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಬೆಂಗಳೂರಿನ ಟ್ರಾಫಿಕ್ ಮತ್ತು ಮುಂಬೈ-ಚೆನ್ನೈನ ಮೂಲಸೌಕರ್ಯಗಳ ಕುರಿತು ವ್ಯಂಗ್ಯವಾಡಿದ್ದಾರೆ.

ಬೆಂಗಳೂರು ನಗರ ಇಂದು ಕೇವಲ ಟ್ರಾಫಿಕ್ ಜಾಮ್‌ಗೆ ಹೆಸರುವಾಸಿಯಾಗಿದೆ. ಐಟಿ ಸಿಟಿ ಎಂದು ಖ್ಯಾತಿ ಪಡೆದಿದ್ದ ಬೆಂಗಳೂರಿನ ಇಂದಿನ ಸ್ಥಿತಿ ಏನಾಗಿದೆ ನೋಡಿ? ಅಲ್ಲಿನ ಜನ ಟ್ರಾಫಿಕ್‌ನಿಂದ ಹೈರಾಣಾಗಿದ್ದಾರೆ. ಆದರೆ ನಮ್ಮ ಹೈದರಾಬಾದ್‌ನಲ್ಲಿ ಅಂತಹ ಪರಿಸ್ಥಿತಿ ಇಲ್ಲ,” ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ. ಮಳೆ ಬಂದರೆ ಚೆನ್ನೈ ಮತ್ತು ಮುಂಬೈ ನಗರಗಳು ಹೇಗೆ ಸ್ಥಗಿತಗೊಳ್ಳುತ್ತವೆ ಎಂಬುದನ್ನು ಪ್ರಸ್ತಾಪಿಸಿದ ಅವರು, ಹೈದರಾಬಾದ್ ಅಂತಹ ಯಾವುದೇ ಸಮಸ್ಯೆಗಳನ್ನು ಎದುರಿಸುತ್ತಿಲ್ಲ ಎಂದು ಪ್ರತಿಪಾದಿಸಿದರು.

”ಹೈದರಾಬಾದ್ ಅನ್ನು ಮಾಲಿನ್ಯ ಮುಕ್ತ ನಗರವನ್ನಾಗಿ ಮಾಡುತ್ತೇವೆ. ನಮಗೆ ಬೆಂಗಳೂರು ಅಥವಾ ಮುಂಬೈ ನಗರಗಳು ಸ್ಪರ್ಧಿಯಲ್ಲ. ನಮ್ಮ ಸ್ಪರ್ಧೆ ಏನಿದ್ದರೂ ಸಿಂಗಾಪುರ ಮತ್ತು ಟೋಕಿಯೋದಂತಹ ಜಾಗತಿಕ ನಗರಗಳ ಜೊತೆಗೆ,” ಎಂದು ಅವರು ಘೋಷಿಸಿದ್ದಾರೆ.ಇದೀಗ ಈ ಹೇಳಿಕೆ ಕನ್ನಡಿಗರ ಮತ್ತು ಕರ್ನಾಟಕದ ರಾಜಕೀಯ ನಾಯಕರ ಆಕ್ರೋಶಕ್ಕೆ ಕಾರಣವಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

RELATED ARTICLES
- Advertisment -
Google search engine

Most Popular