Tuesday, March 10, 2026
Google search engine

Homeರಾಜಕೀಯಗುತ್ತಿಗೆದಾರರ ಬಾಕಿ ಬಿಲ್‌ಗಳು ಹಂತ ಹಂತವಾಗಿ ಪಾವತಿ : ಸಚಿವ ಸತೀಶ್ ಜಾರಕಿಹೊಳಿ

ಗುತ್ತಿಗೆದಾರರ ಬಾಕಿ ಬಿಲ್‌ಗಳು ಹಂತ ಹಂತವಾಗಿ ಪಾವತಿ : ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ : ರಾಜ್ಯದ ಗುತ್ತಿಗೆದಾರರ ಬಾಕಿ ಬಿಲ್‌ಗಳನ್ನು ಒಂದೇ ಬಾರಿ ಪಾವತಿಸಲು ಸಾಧ್ಯವಾಗುವುದಿಲ್ಲ. ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿಯವರು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಈ ವಿಷಯವನ್ನು ಮುಖ್ಯಮಂತ್ರಿಯಾಗಿರುವ ಹಾಗೂ ಹಣಕಾಸು ಇಲಾಖೆಯ ಹೊಣೆ ಹೊತ್ತಿರುವ ಸಿದ್ದರಾಮಯ್ಯ ಅವರು ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಎಂದರಲ್ಲದೆ, ಮುಖ್ಯಮಂತ್ರಿ ಸ್ವತಃ ಹಣಕಾಸು ಇಲಾಖೆಯನ್ನೂ ನೋಡಿಕೊಳ್ಳುತ್ತಿರುವುದರಿಂದ ಈ ವಿಷಯದ ಕುರಿತು ಸಭೆ ಕರೆದರೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದು ತಿಳಿಸಿದರು.

ಅಲ್ಲದೆ ಗುತ್ತಿಗೆದಾರರ ಬಾಕಿ ಬಿಲ್‌ಗಳನ್ನು ತೀರಿಸಲು ಬಜೆಟ್‌ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡುವುದರಿಂದ ಸಮಸ್ಯೆ ಸುಲಭವಾಗಿ ನಿರ್ವಹಿಸಬಹುದು ಎಂದು ಅಭಿಪ್ರಾಯಪಟ್ಟರು.

ಬಜೆಟ್‌ನಲ್ಲಿ ವಿಶೇಷವಾಗಿ ಈ ಬಾಕಿ ಪಾವತಿಗೆ ಅನುದಾನ ಮೀಸಲು ಮಾಡಿದರೆ ಪಾವತಿ ಪ್ರಕ್ರಿಯೆ ಸುಗಮವಾಗುತ್ತದೆ. ಈ ಬಗ್ಗೆ ಅಂತಿಮ ನಿರ್ಧಾರವನ್ನು ಹಣಕಾಸು ಸಚಿವರಾಗಿರುವ ಮುಖ್ಯಮಂತ್ರಿಯವರೇ ತೆಗೆದುಕೊಳ್ಳಬೇಕು ಎಂದು ಹೇಳಿದರು. ಇನ್ನೂ ಹಳೆಯ ಬಾಕಿಗಳ ಬಹುಪಾಲು ಪಾವತಿಸಲಾಗಿದೆ. ಆದರೆ, ಇತ್ತೀಚೆಗೆ ಪೂರ್ಣಗೊಂಡ ಕಾಮಗಾರಿಗಳ ಬಿಲ್‌ಗಳು ಇನ್ನೂ ಬಾಕಿಯಿವೆ. ಎಲ್ಲಾ ಬಿಲ್‌ಗಳನ್ನು ಒಂದೇ ಬಾರಿ ಬಿಡುಗಡೆ ಮಾಡಲು ಸರ್ಕಾರಕ್ಕೆ ಸಾಧ್ಯವಾಗುವುದಿಲ್ಲ. ಅವುಗಳನ್ನು ಹಂತ ಹಂತವಾಗಿ ಪಾವತಿಸಲಾಗುತ್ತದೆ ಎಂದರು.

ಇದೇ ವೇಳೆ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ನಡುವೆ ಸಭೆ ಏರ್ಪಡಿಸುವುದಾಗಿ ತಿಳಿಸಿದ ಅವರು, ಸಭೆಯ ನಂತರ ಸ್ಪಷ್ಟ ಕಾರ್ಯಯೋಜನೆ ರೂಪಿಸಲಾಗುತ್ತದೆ ಎಂದರು. ಇದೇ ವೇಳೆ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಹೇಳಿದ ಸಚಿವರು, ಸೇತುವೆ ನಿರ್ಮಾಣಕ್ಕೆ ರೂ.2,000 ಕೋಟಿ ಅನುದಾನ ಮೀಸಲಿಡಲಾಗಿದೆ. ಈ ಯೋಜನೆಗಳು ಸುಮಾರು 80 ರಿಂದ 100 ವಿಧಾನಸಭಾ ಕ್ಷೇತ್ರಗಳನ್ನು ಸಂಪರ್ಕಿಸುವಂತೆ ರೂಪಿಸಲಾಗಿದೆ ಎಂದು ವಿವರಿಸಿದರು.

ಸರ್ಕಾರದ ಗ್ಯಾರಂಟಿ ಯೋಜನೆಗಳಡಿ ನೀಡುವ ಹಣದ ಪಾವತಿಯಲ್ಲಿ 2–3 ತಿಂಗಳ ವಿಳಂಬವಾಗಬಹುದು. ಆದರೆ, ಫಲಾನುಭವಿಗಳಿಗೆ ಹಣ ತಲುಪುತ್ತದೆ ಎಂದು ಭರವಸೆ ನೀಡಿದರು.

RELATED ARTICLES
- Advertisment -
Google search engine

Most Popular