Tuesday, March 10, 2026
Google search engine

Homeರಾಜ್ಯಆರ್ ಪಿಎಫ್ ನಿಂದ 201 ಸ್ಮಾರ್ಟ್ ಫೋನ್‌ಗಳು ವಶಕ್ಕೆ

ಆರ್ ಪಿಎಫ್ ನಿಂದ 201 ಸ್ಮಾರ್ಟ್ ಫೋನ್‌ಗಳು ವಶಕ್ಕೆ

201 ಸ್ಮಾರ್ಟ್‌ಫೋನ್‌ಗಳನ್ನು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ರೈಲ್ವೆ ಸುರಕ್ಷತಾ ಪಡೆ (ಆರ್‌ಪಿಎಫ್‌) ಸಿಬ್ಬಂದಿ ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣದಲ್ಲಿ ಸೋಮವಾರ ವಶಪಡಿಸಿಕೊಂಡಿದ್ದಾರೆ. ಅವುಗಳ ಮೌಲ್ಯ ₹ 10.05 ಲಕ್ಷ ಎಂದು ಅಂದಾಜಿಸಲಾಗಿದೆ.ಕೇರಳ ರಾಜ್ಯದ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಚಿನ್ನ, ನಗದು, ಮತ್ತಿತರ ಬೆಲೆಬಾಳುವ ವಸ್ತುಗಳು ರೈಲಿನ ಮೂಲಕ ಆ ರಾಜ್ಯಕ್ಕೆ ಕಳ್ಳಸಾಗಣೆಯಾಗುವುದನ್ನು ತಪ್ಪಿಸಲು ಆರ್‌ಪಿಎಫ್‌ ಸಿಬ್ಬಂದಿಯು ರೈಲುಗಳಲ್ಲಿ ತಪಾಸಣಾ ಕಾರ್ಯವನ್ನು ತೀವ್ರಗೊಳಿಸಿದ್ದಾರೆ. ಸ್ಮಾರ್ಟ್‌ಫೋನ್‌ಗಳಿದ್ದ ಬ್ಯಾಗ್‌ ಈ ತಪಾಸಣೆ ವೇಳೆ ಪತ್ತೆಯಾಗಿದೆ.
ರೈಲು ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸಿದ್ದ ಸಿಬ್ಬಂದಿ ದೇಹದಲ್ಲಿ ಧರಿಸಿದ್ದ ಕ್ಯಾಮೆರಾಗಳಲ್ಲಿ (ಬಾಡಿ ವೋರ್ನ್‌ ಕ್ಯಾಮೆರಾ) ದಾಖಲಾದ ದೃಶ್ಯಗಳನ್ನು ಪರಿಶೀಲಿಸಲಾಗಿದೆ. ಈ ಬೋಗಿಯಲ್ಲಿ ತಪಾಸಣಾ ಕಾರ್ಯ ನಡೆಯುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ವರ್ತಿಸಿರುವುದು ಕಂಡುಬಂದಿದೆ. ಅಪರಾಧ ಗುಪ್ತವಾರ್ತೆ ಶಾಖೆ ಮತ್ತು ವಿಭಾಗೀಯ ಅಪರಾಧ ತಡೆ ಮತ್ತು ಪತ್ತೆ ದಳದ ನೆರವಿನೊಂದಿಗೆ ಈ ಅನುಮಾನಾಸ್ಪದ ವ್ಯಕ್ತಿಗಳ ಪತ್ತೆಗೆ ಕ್ರಮ ವಹಿಸಲಾಗಿದೆ. ಈ ಬಗ್ಗೆ ಸರ್ಕಾರದ ಜೊತೆಗೂ ಮಾಹಿತಿ ಹಂಚಿಕೊಳ್ಳಲಾಗಿದ್ದು, ರೈಲ್ವೆ ಪೊಲೀಸರು ಪ್ರಕರಣದ ತನಿಖೆಯನ್ನು ಹಾಗೂ ವಶಪಡಿಸಿಕೊಂಡ ಸ್ವತ್ತುಗಳ ಕುರಿತ ಕಾನೂನು ಪ್ರಕ್ರಿಯೆಯನ್ನು ಮುಂದುವರಿಸಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular