Thursday, March 12, 2026
Google search engine

Homeಅಪರಾಧಕಾನೂನುರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ರದ್ದು

ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ರದ್ದು

ನವದೆಹಲಿ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯಲ್ಲಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ ನ ಕ್ರಿಮಿನಲ್ ನ್ಯಾಯಾಲಯ ರದ್ದು ಮಾಡಿದೆ.

ನಾಸಿಕ್ ಮೂಲದ ನಿರ್ಭಯಾ ಫೌಂಡೇಶನ್ ಅಧ್ಯಕ್ಷ ದೇವೇಂದ್ರ ಭುತಡಾ ಅವರು ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ್ದರು. 2022ರ ಜೂನ್ 15, 16ರಂದು ಹಿಂಗೋಲಿ ಮತ್ತು ಅಕೋಲೆಯಲ್ಲಿ ನಡೆದ ರ್‍ಯಾಲಿಗಳಲ್ಲಿ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗಳು ಮಾನಹಾನಿಕರ ಮತ್ತು ಅವಹೇಳನಕಾರಿಯಾಗಿತ್ತು ಎಂದು ಅವರು ಆರೋಪಿಸಿದ್ದರು. ಭುತಡಾ ಅವರ ದೂರಿನ ಮೇರೆಗೆ ಭಾರತೀಯ ದಂಡ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 499 (ಮಾನನಷ್ಟ) ಮತ್ತು 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ನಾಸಿಕ್ ನ್ಯಾಯಾಲಯ ಸೆಪ್ಟೆಂಬರ್ 2024ರಲ್ಲಿ ರಾಹುಲ್ ಗಾಂಧಿಯವರಿಗೆ ಸಮನ್ಸ್ ಜಾರಿ ಮಾಡಿತ್ತು.

ನಂತರ ಜಾಮೀನು ಮಂಜೂರು ಮಾಡಿದ್ದ ನ್ಯಾಯಾಲಯ, ವರ್ಚುವಲ್ (ವಿಡಿಯೋ ಕಾನ್ಫರೆನ್ಸಿಂಗ್) ಮೂಲಕ ವಿಚಾರಣೆಗೆ ಹಾಜರಾಗಲು ಅನುಮತಿ ನೀಡಿತ್ತು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದರು.

ಸೆಪ್ಟೆಂಬರ್ 2024ರಲ್ಲಿ ನ್ಯಾಯಾಲಯವು ಪ್ರಕರಣದ ತನಿಖೆಗೆ ಆದೇಶಿಸಿತ್ತು. ಪೊಲೀಸರು ತಮ್ಮ ವರದಿಯನ್ನು ಸಲ್ಲಿಸಿದ ನಂತರ, ದೂರುದಾರರು ಪ್ರಕರಣವನ್ನು ಹಿಂಪಡೆಯಲು ಮುಂದಾದರು. ಹಾಗಾಗಿ, ವಿಚಾರಣಾ ನ್ಯಾಯಾಧೀಶರು ಮಾನನಷ್ಟ ಮೊಕದ್ದಮೆ ವಿಚಾರಣೆಯನ್ನು ಮುಕ್ತಾಯಗೊಳಿಸಿದರು

RELATED ARTICLES
- Advertisment -
Google search engine

Most Popular