ಮಂಗಳೂರು:
ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡವನನ್ನು ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ. ಶರತ್ ಎಸ್, ಬಂಧಿತ ವ್ಯಕ್ತಿ. ದಿನಾಂಕ 24.03.2022 ರ ರಾತ್ರಿ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣದಲ್ಲಿ (ಅ ಕ್ರ ಸಂಖ್ಯೆ: 22/2022 ಕಲಂ 457, 380 ಐಪಿಸಿ) ಆರೋಪಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಶರತ್ ಎಸ್ (24) ಎಂಬಾತನನ್ನು ಬೆಳ್ಳಾರೆ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯದ ನ್ಯಾಯಾದೀಶರಾದ ಶಿವಣ್ಣ ಹೆಚ್ ಆರ್ ರವರು ಪ್ರಕರಣದಲ್ಲಿ ಆರೋಪಿಗೆ ಕಲಂ 457 ಐಪಿಸಿ ರಲ್ಲಿ 6 ತಿಂಗಳ ಸಾದಾರಣ ಸಜೆ ಹಾಗೂ 500 ದಂಡ, ಕಲಂ 380 ಐಪಿಸಿ ಯಲ್ಲಿ 10 ತಿಂಗಳ ಸಾದಾರಣ ಸಜೆ ಹಾಗೂ 500 ದಂಡವನ್ನು ವಿಧಿಸಿದ್ದು, ದಂಡ ಪಾವತಿಸದಿದ್ದರೆ 10 ದಿನಗಳ ಸಜೆಯನ್ನು ನೀಡಿ ಆದೇಶಿಸಿದ್ದಾರೆ.
ಪ್ರಕರಣದ ತನಿಖಾಧಿಕಾರಿಗಳಾಗಿ ಸಂತೋಷ ಬಿ ಪಿ, ಪಿ ಎಸ್ ಐ ರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದು, ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಪ್ರೀತಿ ಎಂ ಸಿ ರವರು ಸಮರ್ಥ ವಾದ ಮಂಡನೆ ನಡೆಸಿರುತ್ತಾರೆ.
ಮುಂದುವರಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಸದ್ರಿ ಆರೋಪಿತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 269 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದಲ್ಲಿ ಮಾನ್ಯ ನ್ಯಾಯಾದೀಶರಾದ ರೂ 1000 ದಂಡ ಅಥವಾ 10 ದಿನಗಳ ಕಾರಾಗೃಹ ವಾಸ ವಿಧಿಸಿ ಆದೇಶಿಸಿದೆ.



