Friday, March 13, 2026
Google search engine

Homeರಾಜ್ಯನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಇರುತ್ತೇನೆ : ಸಿಎಂ ಸಿದ್ದರಾಮಯ್ಯ

ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಇರುತ್ತೇನೆ : ಸಿಎಂ ಸಿದ್ದರಾಮಯ್ಯ

ವರಕೋಡು(ಮೈಸೂರು) : ‘ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು ಗ್ರಾಮದ ಬೀರೇಶ್ವರಸ್ವಾಮಿ ದೇವಾಲಯದಲ್ಲಿ ನಡೆದ ವಿಶೇಷ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕ್ಷೇತ್ರದ ಜನತೆ ಮತ್ತು ತಮ್ಮ ರಾಜಕೀಯ ಸಿದ್ಧಾಂತದ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.

ರಾಜಕೀಯ ನಿವೃತ್ತಿ ಇಲ್ಲ: ರಾಜಕೀಯದಲ್ಲಿ ನಾನು ಸೋಲು ಮತ್ತು ಗೆಲುವು ಎರಡನ್ನೂ ಕಂಡಿದ್ದೇನೆ. ಆದರೆ ಸಾರ್ವಜನಿಕ ಸೇವೆ ಮಾಡುವುದನ್ನು ನಿಲ್ಲಿಸುವುದಿಲ್ಲ. ನನ್ನ ಜೀವನದ ಕೊನೆಯ ಕ್ಷಣದವರೆಗೂ ನಾನು ರಾಜಕೀಯದಲ್ಲೇ ಇರುತ್ತೇನೆ ಎಂದು ಸ್ಪಷ್ಟಪಡಿಸಿದ್ದು, “ರಾಜ್ಯದ ಮುಖ್ಯಮಂತ್ರಿಯಾಗಿ ಇಡೀ ಕರ್ನಾಟಕದ ಜವಾಬ್ದಾರಿ ನನ್ನ ಮೇಲಿದೆ. ಈ ಕಾರಣದಿಂದಾಗಿ ನನ್ನ ಸ್ವಂತ ಕ್ಷೇತ್ರವಾದ ವರುಣಾಕ್ಕೆ ಪದೇ ಪದೇ ಬರಲು ಸಾಧ್ಯವಾಗುತ್ತಿಲ್ಲ. ಅಭಿವೃದ್ಧಿ ಕೆಲಸಗಳ ಒತ್ತಡ ಹೆಚ್ಚಿದೆ” ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಇನ್ನೂ ನಾನು ಬರಲು ಸಾಧ್ಯವಾಗದಿದ್ದರೂ, ನನ್ನ ಮಗ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಕ್ಷೇತ್ರಕ್ಕೆ ಬರುತ್ತಾರೆ. ನಿಮ್ಮ ಸಮಸ್ಯೆಗಳನ್ನು ಆಲಿಸಿ, ಅವುಗಳನ್ನು ಪರಿಹರಿಸುವ ಜವಾಬ್ದಾರಿಯನ್ನು ಅವರು ನಿಭಾಯಿಸುತ್ತಾರೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular