ಕಲ್ಲೇರಿ ಎಂಬಲ್ಲಿ ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ 5 ವರ್ಷ ಪ್ರಾಯದ ಬಾಲಕಿ ಮೃತಪಟ್ಟು ಇತರ ಇಬ್ಬರು ಗಾಯಗೊಂಡ ಘಟನೆ ಸೋಮವಾರ ಸಂಭವಿಸಿದೆ.
ತಣ್ಣಿರುಪಂತ ಗ್ರಾಮದ ಕೊಡಂಗೆ ಮನೆ ನಿವಾಸಿ ಇಸ್ಮಾಯಿಲ್ ಎಂಬವರು ತನ್ನ ಮಗಳು ಸಾಜಿರಾ ಮತ್ತು ಮೊಮ್ಮಗಳು ಸುಹೈರಾ ಳನ್ನು ಕುಳ್ಳಿರಿಸಿಕೊಂಡು ಕಲ್ಲೇರಿಯಿಂದ ಕುಪ್ಪೆಟ್ಟಿಗೆ ಹೋಗುತ್ತಿದ್ದಾಗ ಎದುರುಗಡೆಯಿಂದ ಬಂದ ವೇಣೂರು ಮೂಲದ ಶಿವಪ್ರಸಾದ್ ಎಂಬವರು ಚಲಾಯಿಸಿಕೊಂಡಿದ್ದ ಕಾರು ಢಿಕ್ಕಿ ಹೊಡೆಯಿತು ಎಂದು ತಿಳಿದುಬಂದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸುಹೈರಾ ಮತ್ತಾಕೆಯ ತಾಯಿ ಸಾಜಿರಾ (33) , ದ್ವಿಚಕ್ರ ವಾಹನ ಸವಾರ ಬಾಲಕಿಯ ಅಜ್ಜ ಇಸ್ಮಾಯಿಲ್ (60) ಎಂಬವರು ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು.
ಈ ಪೈಕಿ ಗಂಭೀರವಾಗಿ ಗಾಯಗೊಂಡ ಸುಹೈರಾ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ರಾತ್ರಿ ಸಾವನ್ನಪ್ಪಿದ್ದಾಳೆಂದು ಪೊಲೀಸ್ ಮೂಲಗಳು ತಿಳಿಸಿದೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



