ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಕ್ರ 169/2018 ಕಲಂ: 323, 504, 506, 406, 424 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಕೇರಳ ಮಲಪ್ಪುರಮ್ ನಿವಾಸಿ ನಿಖಿಲ್ ಕೆ (36) ಎಂಬಾತನು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನನ್ನು ಪುತ್ತೂರು ನಗರ ಪೊಲೀಸ್ ಠಾಣಾ ಪೊಲೀಸರ ತಂಡ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಶಿಲುವೈಪುರ ಎಂಬಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿತನು ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಪಡೆದು, ಆ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೇ ನ್ಯಾಯಾಲಯದ ಷರತ್ತಿನ ಆದೇಶವನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಆತನ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 34/2026 ಕಲಂ: 269 BNS 2023 ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.



