Monday, March 23, 2026
Google search engine

Homeಅಪರಾಧಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾದಕ ವಸ್ತು ವಶ, 3 ಮಂದಿ ಬಂಧನ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾದಕ ವಸ್ತು ವಶ, 3 ಮಂದಿ ಬಂಧನ

ಮಂಗಳೂರು: ನಗರಕ್ಕೆ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಖರೀದಿಸಿಕೊಂಡು ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆಟೋ ರಿಕ್ಷಾದಲ್ಲಿ ಪಂಪವೆಲ್-ಎಕ್ಕೂರು ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆಟೋ ರಿಕ್ಷಾವನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ.

ಹೈದರ್ @ ಹೈದರ್ ಆಲಿ, ಮೊಹಮ್ಮದ್ ಸಜಾದ್, ಜೈಸನ್ ಮೆನೆಜಸ್ ಎಂಬಾತರನ್ನು ವಶಕ್ಕೆ ಪಡೆದುಕೊಂಡು ಅವರುಗಳ ವಶದಿಂದ 2,50,000ಮೌಲ್ಯದ 26 ಗ್ರಾಂ ತೂಕದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ನಗದು ಹಣ – 37,000 ಮೊಬೈಲ್ ಫೋನ್-5, ತೂಕಮಾಪನ, ಆಟೋ ರಿಕ್ಷಾ, ಸಹಿತ ಒಟ್ಟು 4,37,500/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಹೈದರ್ @ ಹೈದರ್ ಆಲಿ ಎಂಬಾತನ ಮೇಲೆ ಈ ಹಿಂದೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರರಣ ಹಾಗೂ 2024ನೇ ವರ್ಷದಲ್ಲಿ ಮಾದಕವಸ್ತು ಮಾರಾಟ ಮಾಡಿದ ಪ್ರಕರಣ ದಾಖಲಾಗಿದ್ದು, ಹಾಗೂ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರಿಗೆ ಹಲ್ಲೆ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದೆ.

ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular