Wednesday, March 25, 2026
Google search engine

Homeರಾಜ್ಯಮಂಗಳೂರಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ

ಮಂಗಳೂರಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ

ಮಂಗಳೂರು
ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಛೇರಿ, ಮಂಗಳೂರು ಇದರ ವತಿಯಿಂದ ಶ್ರೀದೇವಿ ಕಾಲೇಜು ಆಫ್ ನಸಿರ್ಂಗ್, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಹಾಗೂ ಪಿ. ದಯಾನಂದ ಪೈ, ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಕ್ಷಯರೋಗದ ಕುರಿತು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡು ವಿಶ್ವ ಕ್ಷಯರೋಗ ದಿನಾಚರಣೆ 2026 ಕಾರ್ಯಕ್ರಮವನ್ನು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಆರ್.ಎ.ಪಿ.ಸಿ.ಸಿ ಸಭಾಂಗಣದಲ್ಲಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಹೆಚ್.ಆರ್. ತಿಮ್ಮಯ ಅವರು ಕ್ಷಯ ಮುಕ್ತ ಭಾರತ ಅಭಿಯಾನಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ವೆನ್ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್ ಡಿ. ಎಸ್, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣಧಿಕಾರಿ ಡಾ. ಸುದರ್ಶನ್ ಮತ್ತು ಜಿಲ್ಲಾ ಕ್ಷಯ ನಿರ್ಮೂಲನಾಧಿಕಾರಿ ಡಾ. ಖತೀಜ ದಿಲ್‍ಶಾದ್ ಎಂ.ಪಿ ಹಾಗೂ ಜಿಲ್ಲಾ ಕಾರ್ಯಕ್ರಮ ಸಂಯೋಜಕರುಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು. ಜಿಲ್ಲಾ ಕಾರ್ಯಕ್ರಮ ಸಂಯೋಜಕ ಶ್ರೀಹರ್ಷ ವಂದಿಸಿದರು.
ವಿಶ್ವ ಕ್ಷಯರೋಗ ದಿನಾಚರಣೆ 2026 ಕಾರ್ಯಕ್ರಮದ ಅಂಗವಾಗಿ ಕಾಲ್ನಡಿಗೆ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಕಾಲ್ನಡಿಗೆ ಜಾಥಾದಲ್ಲಿ ಮಿಲಾಗ್ರಿಸ್ ಕಾಲೇಜು ಆಫ್ ನರ್ಸಿಂಗ್ ಕ್ಯಾಂಪಸ್ ನಿರ್ದೇಶಕ ರೆವ್. ಡಾ. ಆಲ್ವಿನ್ ಸೆರ್ರಾವೊ ಹಾಗೂ ಪ್ರಾಂಶುಪಾಲ ಡಾ. ಡಯಾನ ಲೋಬೊ, ಪಿ.ಪಿ.ಎಂ ಕೋರ್ಡಿನೇಟರ್ ಮನೋಜ್ ಕೆ. ಭಾಗವಹಿಸಿದರು.

RELATED ARTICLES
- Advertisment -
Google search engine

Most Popular