Wednesday, March 25, 2026
Google search engine

Homeಬ್ರೇಕಿಂಗ್ ನ್ಯೂಸ್ಕೇರಳ ಚುನಾವಣೆ ಹಿನ್ನೆಲೆ: ಮಂಗಳೂರಲ್ಲಿ ಮದ್ಯ ಮಾರಾಟ ನಿಷೇಧ

ಕೇರಳ ಚುನಾವಣೆ ಹಿನ್ನೆಲೆ: ಮಂಗಳೂರಲ್ಲಿ ಮದ್ಯ ಮಾರಾಟ ನಿಷೇಧ

ಮಂಗಳೂರು
ಕೇರಳ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2026ರ ಸಂಬಂಧ ಮತದಾನದ ನಿಮಿತ್ತ ಏಪ್ರಿಲ್ 7 ರ ಸಂಜೆ 5 ಗಂಟೆಯಿಂದ ಏಪ್ರಿಲ್ 9 ರಂದು ಮಧ್ಯರಾತ್ರಿ 12 ಗಂಟೆಯ ತನಕ ಹಾಗೂ ಮತ ಎಣಿಕೆಯ ನಿಮಿತ್ತ ಮೇ 3 ರ ಮಧ್ಯರಾತ್ರಿ 12 ಗಂಟೆಯಿಂದ ಮೇ 4 ರ ಮಧ್ಯರಾತ್ರಿ 12 ಗಂಟೆಯ ತನಕ “ಒಣ ದಿನ”ಎಂದು ಘೋಷಿಸಲಾಗಿದೆ.
ಈ ದಿನಗಳಲ್ಲಿ ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಬಂಟ್ವಾಳ, ಪುತ್ತೂರು ಮತ್ತು ಸುಳ್ಯ ತಾಲೂಕುಗಳ ಗಡಿಭಾಗದ 5 ಕಿ.ಮೀ. ವ್ಯಾಪ್ತಿಯಲ್ಲಿರುವ ಎಲ್ಲಾ ವಿಧದ ಮದ್ಯದಂಗಡಿ/ಬಾರ್ ಸನ್ನದುಗಳನ್ನು, ಮದ್ಯ ತಯಾರಿಕಾ ಘಟಕಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚಲು ಹಾಗೂ ಈ ದಿನಗಳಂದು ನಿಷೇಧಿಸಿರುವ ಪ್ರದೇಶಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶ ಹೊರಡಿಸಿದ್ದಾರೆ.

RELATED ARTICLES
- Advertisment -
Google search engine

Most Popular