ಬೆಂಗಳೂರು : ಈ ಬಾರಿಯ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಯನ್ನ ರದ್ದು ಮಾಡುವಂತೆ ವಿವಿಧ ಕನ್ನಡ ಪರ ಸಂಘಟನೆಗಳು ಆಗ್ರಹಿಸಿವೆ. ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕುವುದಾಗಿಯೂ ಎಚ್ಚರಿಕೆ ನೀಡಿರೋದ್ರಿಂದ, ಭದ್ರತೆ ಕಲ್ಪಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪತ್ರ ಬರೆದಿದೆ.
ಮಾರ್ಚ್ 30 ರಂದು (ಸೋಮವಾರ) ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ನಿಗದಿಯಾಗಿದೆ. ಆದ್ರೆ ತೃತೀಯ ಭಾಷಾ ವಿಷಯ ಪರೀಕ್ಷಾ ದಿನದಂದು ಕೇಂದ್ರಗಳಿಗೆ ಮುತ್ತಿಗೆ ಹಾಕುವುದಾಗಿ ವಿವಿಧ ಕನ್ನಡಪರ, ದಲಿತ ಮತ್ತು ರೈತಪರ ಸಂಘಟನೆಗಳು ಎಚ್ಚರಿಕೆ ನೀಡಿವೆ.
ಈ ಹಿನ್ನೆಲೆ ಮಾ.30 ರಂದು ನಡೆಯುವ ಹಿಂದಿ ಪರೀಕ್ಷೆಯಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಆ ದಿನ ಹೆಚ್ಚಿನ ಪೊಲೀಸ್ ಭದ್ರತೆ ನೀಡುವಂತೆ ಡಿಸಿ ಹಾಗೂ ಎಸ್ಪಿ ಗಳಿಗೆ ಮನವಿ ಸಲ್ಲಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಂಡಲಿ ಎಲ್ಲಾ ಡಿಡಿಪಿಐಗಳಿಗೆ ಪತ್ರ ಬರೆದಿದೆ.



