ತುಳುನಾಡಿನ ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿರುವ ಕಂಬಳ ಕ್ರೀಡೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಗುರುಪುರದ ಮಾಣಿಬೆಟ್ಟುವಿನಲ್ಲಿ ಇದೇ ಬರುವ ಏಪ್ರಿಲ್ 4ರ ಶನಿವಾರದಂದು 3ನೇ ವರ್ಷದ ಹೊನಲು ಬೆಳಕಿನ “ಮೂಳೂರು-ಅಡ್ಡೂರು” ಜೋಡುಕರೆ ಕಂಬಳವನ್ನು ಅತ್ಯಂತ ವಿಜೃಂಭಣೆಯಿಂದ ಆಯೋಜಿಸಲಾಗಿದೆ. ಅಲ್ಲದೆ ಮುಂದಿನ ಬಾರಿ ದಸರಾದಲ್ಲಿಯೂ ಕಂಬಳ ನಡೆಸುವ ಭರವಸೆ ಡಿಸಿಎಂ ಡಿಕೆಶಿ ಅವರಿಂದ ಸಿಕ್ಕಿದೆ ಎಎಂದು ಕಂಬಳ ಸಮಿತಿ ಅಧ್ಯಕ್ಷ ಇನಾಯತ್ ಅಲಿ ತಿಳಿಸಿದ್ದಾರೆ.
ಮಂಗಳೂರು ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಂಬಳ ಎಂಬುದು ಕೇವಲ ಒಂದು ಕ್ರೀಡೆಯಲ್ಲ, ಇದು ನಮ್ಮ ಮಣ್ಣಿನ ಸಂಸ್ಕೃತಿ. ಜಾತಿ, ಮತ, ಪಕ್ಷ ಭೇದ ಮರೆತು ಎಲ್ಲರೂ ಒಂದಾಗಿ ಆಚರಿಸುವ ಈ ಲೋಕೋತ್ಸವದ ಮೂಲಕ ನಮ್ಮ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ” ಎಂದರು.



