Friday, March 27, 2026
Google search engine

Homeಸ್ಥಳೀಯಮುಕ್ತ ವಿಶ್ವವಿದ್ಯಾಲಯದಲ್ಲಿ ಲಂಚ ಆರೋಪ : ಕೆಎಸ್‌ಒಯು ಬ್ಯಾಂಕ್ ಖಾತೆಗಳು ಸ್ಥಗಿತ

ಮುಕ್ತ ವಿಶ್ವವಿದ್ಯಾಲಯದಲ್ಲಿ ಲಂಚ ಆರೋಪ : ಕೆಎಸ್‌ಒಯು ಬ್ಯಾಂಕ್ ಖಾತೆಗಳು ಸ್ಥಗಿತ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಲಂಚ ಹಾಗೂ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಹಣಕಾಸಿನ ದುರುಪಯೋಗ ತಡೆಯಲು ಕೆಎಸ್‌ಒಯುನ ಎಲ್ಲ ಬ್ಯಾಂಕ್ ಖಾತೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸೂಚಿಸಿದೆ.

ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆದಿರುವ ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಪ್ರಕರಣದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಆರ್.ಆರ್. ಪಾಟೀಲ ಅವರನ್ನು ನೇಮಕ ಮಾಡಲಾಗಿದ್ದು, ತನಿಖೆ ಪ್ರಗತಿಯಲ್ಲಿ ಇದೆ.

ತನಿಖೆ ನಡೆಯುತ್ತಿರುವ ಹಿನ್ನೆಲೆ ಹಣಕಾಸಿನ ದುರುಪಯೋಗವನ್ನು ತಡೆಯಲು ವಿಶ್ವವಿದ್ಯಾನಿಲಯದ ಎಲ್ಲಾ ಬ್ಯಾಂಕ್ ಖಾತೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಉನ್ನತ ಶಿಕ್ಷಣ ಇಲಾಖೆ ಸಂಬಂಧಪಟ್ಟ ಬ್ಯಾಂಕುಗಳಿಗೆ ಸೂಚನೆ ನೀಡಿದೆ. ಈ ಕ್ರಮದಿಂದ ಪ್ರಕರಣಕ್ಕೆ ಸಂಬಂಧಿಸಿದ ಹಣಕಾಸು ವ್ಯವಹಾರಗಳ ಮೇಲೆ ಕಟ್ಟುನಿಟ್ಟಿನ ನಿಯಂತ್ರಣ ಹೇರಲು ಸರ್ಕಾರ ಮುಂದಾಗಿದೆ.

RELATED ARTICLES
- Advertisment -
Google search engine

Most Popular