Sunday, March 29, 2026
Google search engine

Homeಅಪರಾಧಹಲವು ಘೋರ ಅಪರಾಧಗಳಲ್ಲಿ ಆರೋಪಿಯಾಗಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದವ ಕೊನೆಗೂ ಪತ್ತೆ

ಹಲವು ಘೋರ ಅಪರಾಧಗಳಲ್ಲಿ ಆರೋಪಿಯಾಗಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದವ ಕೊನೆಗೂ ಪತ್ತೆ

ಹಲವು ಘೋರ ಅಪರಾಧಗಳಲ್ಲಿ ಆರೋಪಿಯಾಗಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದವ‌ ಕೊನೆಗೂ ಪತ್ತೆಯಾದ ಘಟನೆ ಮಂಗಳೂರಲ್ಲಿ ನಡೆದಿದೆ.
ಕಡಬ ಪೊಲೀಸ್ ಠಾಣಾ ಅ.ಕ್ರ: 15/2012, ಕಲಂ:302,201 IPC ಪ್ರಕರಣದಲ್ಲಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕನ್ವಿಕ್ಷನ್ ವಾರಂಟ್ ಆರೋಪಿ ಸುಳ್ಯ ಅಜ್ಜಾವರ ನಿವಾಸಿಯಾದ ಎನ್.ಎಂ. ಅಜೀಜ್ ಎಂಬಾತನಿಗೆ ಕರ್ನಾಟಕ ಉಚ್ಚ ನ್ಯಾಯಾಲಯ 10 ವರ್ಷ ಶಿಕ್ಷೆ ವಿಧಿಸಿತ್ತು. ಸದ್ರಿ ಆಸಾಮಿಯು 2018 ರಲ್ಲಿ ಕೇರಳ ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ಪೊಲೀಸರಿಗೆ ಹಲ್ಲೆ ಮಾಡಿ ತಪ್ಪಿಸಿಕೊಂಡಿದ್ದು, ನಂತರ ಕಲಬುರಗಿ ಜೇವರ್ಗಿ ನಿವಾಸಿ ಬಸವರಾಜು ಎಂಬುದಾಗಿ ಹೆಸರು ಬದಲಿಸಿಕೊಂಡು ಆಂಧ್ರಪ್ರದೇಶದಲ್ಲಿ ವಾಸವಾಗಿದ್ದ. ಈತನ ಪತ್ತೆಗೆ ಸತತವಾಗಿ ಪ್ರಯತ್ನಿಸಲಾಗಿತ್ತು. ಆಗ ಈತ ಆಂಧ್ರಪ್ರದೇಶದ ಚಿತ್ತೂರು ಜೈಲಿನಲ್ಲಿರುವುದು ದೃಢಪಟ್ಟಿತ್ತು. ಸಂಬಂಧಪಟ್ಟ ನ್ಯಾಯಾಲಯದಿಂದ ಬಾಡಿವಾರಂಟ್ ಮೂಲಕ ಸದ್ರಿ ಆಸಾಮಿಯನ್ನು ವಶಕ್ಕೆ ಪಡೆದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಪೊಲೀಸ್ ಇಲಾಖೆ ತಿಳಿಸಿದೆ.

RELATED ARTICLES
- Advertisment -
Google search engine

Most Popular