Monday, March 30, 2026
Google search engine

Homeರಾಜ್ಯಏಪ್ರಿಲ್ 1ರಿಂದ ಟೋಲ್‌ನಲ್ಲಿ ನಗದು ರದ್ದು, ಫಾಸ್ಟ್ಯಾಗ್ ಕಡ್ಡಾಯ

ಏಪ್ರಿಲ್ 1ರಿಂದ ಟೋಲ್‌ನಲ್ಲಿ ನಗದು ರದ್ದು, ಫಾಸ್ಟ್ಯಾಗ್ ಕಡ್ಡಾಯ

ಬೆಂಗಳೂರು : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸುವ ವಾಹನ ಸವಾರರಿಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮಹತ್ವದ ಸೂಚನೆಯೊಂದನ್ನು ನೀಡಿದೆ. ಏಪ್ರಿಲ್ 1, 2026 ರಿಂದ ಜಾರಿಗೆ ಬರುವಂತೆ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ನೆಲಮಂಗಲ ಟೋಲ್ ಸೇರಿದಂತೆ ಪ್ರಮುಖ ಹೆದ್ದಾರಿಗಳಲ್ಲಿ ಈಗಾಗಲೇ ಸಾರ್ವಜನಿಕ ಪ್ರಕಟಣೆಯ ಫಲಕಗಳನ್ನು ಹಾಕಲಾಗಿದೆ.

ಹೊಸ ನಿಯಮದ ಪ್ರಕಾರ, ಟೋಲ್ ಬೂತ್​​ಗಳಲ್ಲಿ ನಗದು ಪಡೆಯಲಾಗುವುದಿಲ್ಲ. ಸುಗಮ ಪ್ರಯಾಣಕ್ಕಾಗಿ ಕಡ್ಡಾಯವಾಗಿ ಫಾಸ್ಟಾಗ್ ಅಥವಾ ಯುಪಿಐ ಮೂಲಕವೇ ಪಾವತಿ ಮಾಡಬೇಕಿದೆ. ಏಪ್ರಿಲ್ 15 ರಿಂದ ಫಾಸ್ಟಾಗ್ ಸ್ಕ್ಯಾನ್ ಆಗದಿದ್ದರೆ ಸಿಬ್ಬಂದಿ ಮ್ಯಾನುಯಲ್ ಆಗಿ ವಾಹನ ಸಂಖ್ಯೆ ನಮೂದಿಸಿ ಟೋಲ್ ಪಡೆಯುವುದನ್ನು ರದ್ದುಗೊಳಿಸಲಾಗಿದೆ. ಕೇವಲ ಆಟೋಮ್ಯಾಟಿಕ್ ಫಾಸ್ಟ್​ಟ್ಯಾಗ್ ರೀಡರ್ ಮೂಲಕ ಮಾತ್ರ ಪಾವತಿಗೆ ಅವಕಾಶವಿರುತ್ತದೆ. ನೆಲಮಂಗಲ-ಹಾಸನ ಹಾಗೂ ಬೆಂಗಳೂರು-ತುಮಕೂರು-ಪುಣೆ ಹೆದ್ದಾರಿಯ ಟೋಲ್ ಪ್ಲಾಜಾಗಳಲ್ಲಿ ಹೊಸ ನಿಯಮದ ಬಗ್ಗೆ ದೊಡ್ಡ ಫಲಕಗಳಲ್ಲಿ ಮಾಹಿತಿ ನೀಡಲಾಗಿದೆ.

ಹೀಗಾಗಿ ವಾಹನ ಸವಾರರು ತಮ್ಮ ಫಾಸ್ಟ್​ಟ್ಯಾಗ್ ಸಕ್ರಿಯವಾಗಿದೆಯೇ ಮತ್ತು ಅದರಲ್ಲಿ ಪೂರಕ ಬ್ಯಾಲೆನ್ಸ್ ಇದೆಯೇ ಎಂದು ಖಚಿತಪಡಿಸಿಕೊಂಡು ಹೆದ್ದಾರಿಗಿಳಿಯುವುದು ಉತ್ತಮ.

RELATED ARTICLES
- Advertisment -
Google search engine

Most Popular