Wednesday, April 1, 2026
Google search engine

Homeದೇಶಮಧ್ಯಪ್ರಾಚ್ಯ ಸಂಘರ್ಷ ; ಎಲ್‌ಪಿಜಿ ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆ

ಮಧ್ಯಪ್ರಾಚ್ಯ ಸಂಘರ್ಷ ; ಎಲ್‌ಪಿಜಿ ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆ

ನವದೆಹಲಿ : ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ, ಸಾರ್ವಜನಿಕ ವಲಯದ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಬುಧವಾರ ₹195.50 ರಷ್ಟು ಹೆಚ್ಚಳ ಮಾಡಿವೆ.

ಈ ಏರಿಕೆಯ ನಂತರ ಬೆಂಗಳೂರಿನಲ್ಲಿ 19 ಕೆಜಿ ತೂಕದ ವಾಣಿಜ್ಯ ಬಳಕೆ ಸಿಲಿಂಡರ್‌ ಬೆಲೆ 1,958.00 ರೂ.ಗೆ ಏರಿದ್ದು, ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ ₹2,078.50ಕ್ಕೆ ತಲುಪಿದೆ. ಇದಕ್ಕೂ ಮೊದಲು ಮಾರ್ಚ್ 1ರಂದು ಪ್ರತಿ ಸಿಲಿಂಡರ್ ಬೆಲೆಯನ್ನು ₹114.5 ಹೆಚ್ಚಿಸಲಾಗಿತ್ತು.

ಗೃಹಬಳಕೆಯ ಸಿಲಿಂಡರ್ ಬೆಲೆ ಸ್ಥಿರ : ಸಾಮಾನ್ಯ ಜನರಿಗೆ ಸಮಾಧಾನಕರ ಸಂಗತಿಯೆಂದರೆ, ಮನೆಗಳಲ್ಲಿ ಬಳಸುವ 14.2 ಕೆಜಿ ತೂಕದ ಗೃಹಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಮಾ.7 ರಂದು ಗೃಹಬಳಕೆಯ ಸಿಲಿಂಡರ್ ಬೆಲೆಯನ್ನು ₹60 ರಷ್ಟು ಹೆಚ್ಚಿಸಲಾಗಿತ್ತು. ಪ್ರಸ್ತುತ ಬೆಂಗಳೂರಿನಲ್ಲಿ ಇದರ ಬೆಲೆ 915.50 ರೂ. ಹಾಗೂ ದೆಹಲಿಯಲ್ಲಿ ಇದರ ಬೆಲೆ ₹913 ರಷ್ಟಿದೆ.

ಪಶ್ಚಿಮ ಏಷ್ಯಾದಲ್ಲಿನ ಯುದ್ಧದಿಂದಾಗಿ ಇಂಧನ ಪೂರೈಕೆ ಸರಪಳಿಯಲ್ಲಿ ವ್ಯತ್ಯಯ ಉಂಟಾಗಿದ್ದು, ಜಾಗತಿಕ ತೈಲ ಬೆಲೆಗಳು ಸುಮಾರು 50% ರಷ್ಟು ಜಿಗಿದಿವೆ.

RELATED ARTICLES
- Advertisment -
Google search engine

Most Popular