ಬೆಂಗಳೂರು : ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳ ವಿರುದ್ಧ, ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.
ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳ ತನಗೆ ಲೈಂಗಿಕ ಹಾಗೂ ಮಾನಸಿಕವಾಗಿ ಶೋಷಣೆ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯು ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ಅವರಿಗೆ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಿಗೆ ಹಾಗೂ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ ಎನ್ನಲಾಗಿದೆ.
ಲೈಂಗಿಕವಾಗಿ ಸಹಕರಿಸುವಂತೆ ಒತಾಯಿಸಿದ್ದು ವಿಡಿಯೋ ಹರಿಬಿಡುವುದಾಗಿ ಕೂಡ ಸ್ವಾಮೀಜಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದು ಈ ಕುರಿತು ಕ್ರಮ ಕೈಗೊಳ್ಳಿ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.



