Thursday, April 9, 2026
Google search engine

Homeರಾಜ್ಯಯೋಗೇಶ್‌ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

ಯೋಗೇಶ್‌ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

ಬೆಂಗಳೂರು : ಧಾರವಾಡ ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಏಪ್ರಿಲ್‌ 15ಕ್ಕೆ ಮುಂದೂಡಿಕೆಯಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಆದೇಶ ಪ್ರಕಟಿಸುವುದಾಗಿ ತಿಳಿಸಿತ್ತು. ಆದೇಶ ಪ್ರಕಟವಾಗುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿದಂತೆ ಎಲ್ಲಾ 21 ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಕೋರ್ಟ್‌ಗೆ ತೆರಳುವ ಮೊದಲು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ವಿನಯ್‌ ಕುಲಕರ್ಣಿ, ದೇವರ ಮೇಲೆ ಭರವಸೆ ಇದೆ. ಸತ್ಯಕ್ಕೆ ಯಾವತ್ತೂ ಜಯ ಸಿಗಲಿದೆ ಎಂಬ ನಂಬಿಕೆಯಿದೆ ಎಂದು ಹೇಳಿದ್ದರು.

ಕೋರ್ಟ್ ಮೇಲೆ ಭರವಸೆ ಇದೆ. ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ಮಾಧ್ಯಮದ ಮುಂದೆ ಮಾತನಾಡುವುದು ಸರಿಯಲ್ಲ. ಕೋರ್ಟ್ ತೀರ್ಪು ಪ್ರಕಟಿಸಲಿ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular