Friday, April 10, 2026
Google search engine

Homeರಾಜ್ಯನೂತನ ರೈಲು ನಿಲ್ದಾಣಕ್ಕೆ ಶೀಘ್ರ ಕ್ರಮ :  ಸಚಿವ ವಿ.ಸೋಮಣ್ಣ

ನೂತನ ರೈಲು ನಿಲ್ದಾಣಕ್ಕೆ ಶೀಘ್ರ ಕ್ರಮ :  ಸಚಿವ ವಿ.ಸೋಮಣ್ಣ

ಮದ್ದೂರು : ಮದ್ದೂರು ಜನತೆಯ ಹಲವು ದಶಕಗಳ ಬೇಡಿಕೆಯಾದ ನೂತನ ರೈಲು ನಿಲ್ದಾಣಕ್ಕೆ ಕೆಲ ದಿನಗಳಲ್ಲೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ರಾಜ್ಯ ಹಾಗೂ ಜಲಶಕ್ತಿ ಸಚಿವ ವಿ.ಸೋಮಣ್ಣ ತಿಳಿಸಿದರು.

ಬೆಂಗಳೂರಿನಿoದ ಮೈಸೂರಿನವರೆಗೆ ರೈಲ್ವೆ ಕಾಮಗಾರಿಗಳ ವೀಕ್ಷಣೆ ಮಾಡುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಗುರುವಾರ ಮದ್ದೂರು ರೈಲು ನಿಲ್ದಾಣಕ್ಕೆ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿರವರೊಂದಿಗೆ ವಿಶೇಷ ರೈಲಿನಲ್ಲಿ ಆಗಮಿಸಿ ಸಾರ್ವಜನಿಕರಿಂದ ಹಲವು ಮನವಿ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು.

ನಗರದ ಸಾರಿಗೆ ನಿಲ್ದಾಣದ  ಸಮೀಪದ ತೋಟಗಾರಿಕೆ ಇಲಾಖೆಯ ಸ್ಥಳದಲ್ಲಿ ನಿಲುಗಡೆ ನೀಡುವ ರೈಲು ನಿಲ್ದಾಣವನ್ನು ನಿರ್ಮಿಸಿದರೆ  ನಗರದ ಹೆಚ್ಚು ಸಾರ್ವಜನಿಕರಿಗೆ ಅನುಕೂಲವಾಗುವ ಬಗ್ಗೆ ಮನವಿಯಿರುವುದರಿಂದ ಕೂಡಲೇ ಕಾರ್ಯಗತವಾಗುವ ನಿಟ್ಟಿನಲ್ಲಿ ಗಮನ ಹರಿಸಲಾಗುವುದು ಎಂದರು.

ಈ ಬಗ್ಗೆ ಇನ್ನೊಂದು ವಾರದಲ್ಲಿ ರೈಲ್ವೆ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ಆಗಮಿಸಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ ಎಂದ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿರವರ ಸೂಚನೆ ಹಾಗೂ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರ ಒತ್ತಡ ಮೇರೆಗೆ ಮಂಡ್ಯ ಜಿಲ್ಲೆಯ ರೈಲ್ವೆ ನಿಲ್ದಾಣಗಳ ಅಭಿವೃದ್ಧಿಯನ್ನು ಮಾಡುವುದರ ಬಗ್ಗೆ ಈಗಾಗಲೇ ಅಂದಾಜುಪಟ್ಟಿಯನ್ನು ಸಿದ್ದಪಡಿಸಲಾಗಿದೆ ಎಂದರು.

ಮುoದಿನ6 ತಿಂಗಳೊಳಗೆ ಈ  ರೈಲ್ವೆ ನಿಲ್ದಾಣಗಳ ಆಧುನೀಕರಣ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪೂರ್ಣಗಳಿಸಿ ಕೇಂದ್ರ ಸಚಿವರಾದ  ಎಚ್. ಡಿ ಕುಮಾರಸ್ವಾಮಿ ಅವರೊಂದಿಗೆ ಆಗಮಿಸಿ ಉದ್ಘಾಟನೆಯನ್ನೂ ಮಾಡಲಾಗುವುದು ಎಂದರು.

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಾತನಾಡಿ, ಬೆಂಗಳೂರು ನಗರ, ರಾಮನಗರ, ಚನ್ನಪಟ್ಟಣ, ಮಂಡ್ಯ ಹಾಗೂ ಮೈಸೂರು ವರೆಗೆ ಸಾಗುವ ಅತ್ಯಂತ ಮಹತ್ವದ ಈ ರೈಲು ಮಾರ್ಗದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳು ಮತ್ತು ಇನ್ನೂ ಆಗಬೇಕಿರುವ ಅಂಡರ್ ಪಾಸ್ ಅಥವಾ ಫ್ಲೈ ಓವರ್ ನಂತಹ ಜನೋಪಯೋಗಿ ಕೆಲಸಗಳ ಬಗ್ಗೆ ಜನರಿಂದ ಹಾಗೂ ಜನಪ್ರತಿನಿಧಿಗಳಿಂದ ಮಾಹಿತಿ ಪಡೆಯಲು ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಆಶುತೋಷ್ ಕುಮಾರ್ ಸಿಂಗ್ ಜೊತೆಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹಾಗೂ ಮೈಸೂರು-ಕೊಡಗು ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ರೈಲುಮಾರ್ಗ ಹಾದುಹೋಗುವ ಮಾರ್ಗವನ್ನು ಪರಿವೀಕ್ಷಣೆ ನಡೆಸಿ ಕಾಮಗಾರಿ ವರದಿ ತಯಾರು ಮಾಡಲಾಗುತ್ತಿದೆ ಎಂದರು.

ಮನವಿ ಸಲ್ಲಿಕೆ

 ಇದೇ ಸಂದರ್ಭದಲ್ಲಿ ಸಾರ್ವಜನಿಕರು ಶಿವಪುರ ಆಶ್ರಯ ಬಡಾವಣೆಗೆ ಸಂಪರ್ಕ ಕಲ್ಪಿಸಲು ಅಂಡರ್ ಪಾಸ್. ಚನ್ನೇಗೌಡನ ದೊಡ್ಡಿಯಲ್ಲಿ ಅಂಡರ್ ಪಾಸ್ ಅಥವಾ ಪ್ಲೇ ಓವರ್ ನಿರ್ಮಾಣ ಮಾಡಲು ಮನವಿ ಮಾಡಿದರು. 3 ರೈಲು ನಿಲುಗಡೆಗೆ ಸೇರಿದಂತೆ ಹಲವು ಮನವಿಗಳನ್ನು ವಿ.ಸೋಮಣ್ಣ ಅವರಿಗೆ ಸಲ್ಲಿಸಲಾಯಿತು.

ಮೈಸೂರಿನ ಸಂಸದರಾದ ಯದುವೀರ್ ಒಡೆಯರ್, ಮಾಜಿ ಶಾಸಕ ಡಿ.ಸಿ.ತಮ್ಮಣ್ಣ, ಮುಖಂಡರಾದ ಮಾದನಾಯಕನಹಳ್ಳಿ ರಾಜಣ್ಣ, ಕೂಳಗೆರೆ ಶೇಖರ್ ಸೇರಿದಂತೆ ಹಲವರು  ಹಾಜರಿದ್ದರು

RELATED ARTICLES
- Advertisment -
Google search engine

Most Popular