Wednesday, April 22, 2026
Google search engine

Homeರಾಜ್ಯಮುಂದಿನ ಎರಡು ದಿನ ರಾಜ್ಯಾಂದ್ಯಂತ ಹಲವೆಡೆ ಮಳೆ..!

ಮುಂದಿನ ಎರಡು ದಿನ ರಾಜ್ಯಾಂದ್ಯಂತ ಹಲವೆಡೆ ಮಳೆ..!

ಬೆಂಗಳೂರು: ಬೇಸಿಗೆ ಆರಂಭವಾಗುತ್ತಿದ್ದಂತೆ, ರಾಜ್ಯದಲ್ಲಿ ಬಿಸಿಲಿನ ತಾಪಮಾನದಿಂದ ಅತೀವ ಸೆಕೆ ಆವರಿಸಿದೆ. ಇದರಿಂದ ಜನರು ತತ್ತರಿಸಿಹೋಗಿದ್ದಾರೆ. ಈ ನಡುವೆ ಮುಂದಿನ 1 ವಾರ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ಇಂದಿನಿಂದ ಏಪ್ರಿಲ್ 26 ರವರೆಗೆ ಕರಾವಳಿ ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ನಿರೀಕ್ಷೆಯಿದೆ. ಹಾಗೆಯೇ ಇವತ್ತು ರಾಜ್ಯದ 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಉತ್ತರ ಕನ್ನಡ, ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ಅಲ್ಲದೆ ಬೆಳಗಾವಿ, ಗದಗ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು, ಈಗಾಗಲೇ ಸುಮಾರು 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದೆ. ಕರಾವಳಿ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಉಷ್ಣಾಂಶ ದಾಖಲಾಗುತ್ತಿದೆ. ಏಪ್ರಿಲ್ ಅಂತ್ಯಕ್ಕೆ ಸೆಖೆ ಇನ್ನೂ ಸಹ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

RELATED ARTICLES
- Advertisment -
Google search engine

Most Popular