Wednesday, April 22, 2026
Google search engine

Homeಬ್ರೇಕಿಂಗ್ ನ್ಯೂಸ್ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ನಟಿ ರನ್ಯಾ ರಾವ್‌ಗೆ ಜಾಮೀನು ಮಂಜೂರು !

ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ನಟಿ ರನ್ಯಾ ರಾವ್‌ಗೆ ಜಾಮೀನು ಮಂಜೂರು !

ಬೆಂಗಳೂರು: ಸುಮಾರು 102 ಕೋಟಿ ರೂಪಾಯಿ ಮೌಲ್ಯದ ಚಿನ್ನದ ಕಳ್ಳಸಾಗಣೆ ಆರೋಪದ ಮೇಲೆ ಒಂದು ವರ್ಷದಿಂದ ಜೈಲಿನಲ್ಲಿದ್ದ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್‌ಗೆ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯವು ಇಂದು ಜಾಮೀನು ಮಂಜೂರು ಮಾಡಿದೆ.

2025ರ ಮಾರ್ಚ್ ತಿಂಗಳಿನಲ್ಲಿ ಡಿಆರ್‌ಐ (DRI) ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದ ನಟಿಗೆ, ಸುದೀರ್ಘ ಕಾನೂನು ಹೋರಾಟದ ಬಳಿಕ ಕೊನೆಗೂ ದೊಡ್ಡ ಮಟ್ಟದ ರಿಲೀಫ್ ಸಿಕ್ಕಂತಾಗಿದ್ದು, ಇಂದು ಸಂಜೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

ದುಬೈನಿಂದ ಅಕ್ರಮವಾಗಿ ಸುಮಾರು 14 ಕೆಜಿಗೂ ಅಧಿಕ ಚಿನ್ನ ಸಾಗಾಟ ಮಾಡಿದ ಆರೋಪ ಎದುರಿಸುತ್ತಿದ್ದ ನಟಿ ರನ್ಯಾ ರಾವ್‌ ಇಂದು ಸಂಜೆ ರಿಲೀಸ್‌ ಆಗುವ ಸಾಧ್ಯತೆ ಇದೆ.

102 ಕೋಟಿ ರೂ.ಗೂ ಅಧಿಕ ಮೌಲ್ಯದ ಚಿನ್ನವನ್ನು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ 2025ರ ಮಾರ್ಚ್ 3ರಂದು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ನಟಿ ರನ್ಯಾ ರಾವ್‌ನನ್ನ ಬಂಧಿಸಿತ್ತು. ಬಂಧನದ ನಂತರ ಆಕೆಯನ್ನ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿತ್ತು.

ಈ ಹಿಂದೆ ಹೈಕೋರ್ಟ್ ಏಕಸದಸ್ಯ ಪೀಠವು ನಟಿಯ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು. ಅಲ್ಲದೆ, ಕೇಂದ್ರೀಯ ಆರ್ಥಿಕ ಗುಪ್ತಚರ ಬ್ಯೂರೋ ಕಾಫಿಪೋಸಾ (COFEPOSA) ಕಾಯ್ದೆಯಡಿ ಬಂಧನ ಆದೇಶ ಹೊರಡಿಸಿದ್ದರಿಂದ ರನ್ಯಾ ರಾವ್‌ಗೆ ಜಾಮೀನು ಸಿಗುವುದು ಕಷ್ಟಕರವಾಗಿತ್ತು.

ಸುಮಾರು ಒಂದು ವರ್ಷದ ಜೈಲು ವಾಸದ ನಂತರ, ಇದೀಗ ಇಂದು (ಏಪ್ರಿಲ್ 22, 2026) ಆರ್ಥಿಕ
ಅಪರಾಧಗಳ ತಡೆ ನ್ಯಾಯಾಲಯವು ನಟಿಗೆ ಜಾಮೀನು ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ಆಕೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

RELATED ARTICLES
- Advertisment -
Google search engine

Most Popular