ಕೋಲ್ಕತ್ತಾ: ಪ್ರಸ್ಥುತ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ಈ ಸಂದರ್ಭದಲ್ಲಿ ದುಷ್ಕರ್ಮಿಗಳು ಬಾಂಬ್ ದಾಳಿ ನಡೆಸಿರುವ ಘಟನೆ ನಡೆದಿದೆ.
ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಎಂಬ ಪ್ರದೇಶದಲ್ಲಿ ಮತದಾನದ ವೇಳೆ ಕೆಲವು ದುಷ್ಕರ್ಮಿಗಳು ಕಚ್ಚಾ ಬಾಂಬ್ ಎಸೆದಿದ್ದಾರೆ. ಬಾಂಬ್ ದಾಳಿಯಿಂದಾಗಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನೌಡಾದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.
ಜಿಲ್ಲೆಯಲ್ಲಿ 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ನಡೆದ ಎರಡನೇ ದಾಳಿ ಇದಾಗಿದೆ. ನಿನ್ನೆ ರಾತ್ರಿಯೂ ಕೂಡ ಶಿವನಗರ ಪ್ರಾಥಮಿಕ ಶಾಲೆಯ ಬಳಿ ಕಚ್ಚಾ ಬಾಂಬ್ ದಾಳಿ ನಡೆದಿತ್ತು. ಘಟನೆಯಲ್ಲಿ ಓರ್ವ ಮಹಿಳೆ ಗಾಯಗೊಂಡಿದ್ದರು. ಸಮೀಪದಲ್ಲಿದ್ದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ಸಾಹಿನಾ ಮುಮ್ರಾಜ್ ಖಾನ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.



