Saturday, April 25, 2026
Google search engine

Homeಅಪರಾಧಜೀವಾವಧಿ ಶಿಕ್ಷೆ ತಡೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ವಿನಯ್ ಕುಲಕರ್ಣಿ

ಜೀವಾವಧಿ ಶಿಕ್ಷೆ ತಡೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ವಿನಯ್ ಕುಲಕರ್ಣಿ

ಬೆಂಗಳೂರು : ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಅವರು ಹೈಕೋರ್ಟ್‌ಗೆ ಮೇಲ್ಮನವಿಯನ್ನ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ಕೋರ್ಟ್ ವಿಧಿಸಿದ್ದ ಜೀವಾವಧಿ ಶಿಕ್ಷೆ ಹಾಗೂ ಸಕ್ಷಮ ನ್ಯಾಯಾಲಯ ನೀಡಿದ್ದ ಕನ್ವಿಕ್ಷನ್ ಆದೇಶವನ್ನ ಪ್ರಶ್ನಿಸಿ, ಶಿಕ್ಷೆಗೆ ತಡೆಯಾಜ್ಞೆ ಮತ್ತು ಜಾಮೀನು ನೀಡುವಂತೆ ಅವರು ಮನವಿ ಮಾಡಿದ್ದಾರೆ.

ತಮ್ಮ ಶಾಸಕ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಗಳಿರುವ ಕಾರಣ, ಶಿಕ್ಷೆಗೆ ತಕ್ಷಣ ತಡೆಯಾಜ್ಞೆ ನೀಡುವಂತೆ ಕೋರಿದ್ದಾರೆ. ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಮುಂದಿನ ವಾರ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ವಿಚಾರಣೆಯ ವೇಳೆ ಸಿಬಿಐ ವಾದವನ್ನೂ ನ್ಯಾಯಾಲಯ ಆಲಿಸುವ ನಿರೀಕ್ಷೆಯಿದೆ. ಜೀವಾವಧಿ ಶಿಕ್ಷೆ ಆದೇಶವನ್ನು ರದ್ದುಪಡಿಸುವಂತೆ ತಮ್ಮ ಅರ್ಜಿಯಲ್ಲಿ ವಿನಯ್ ಕುಲಕರ್ಣಿ ಕೋರಿದ್ದಾರೆ.

RELATED ARTICLES
- Advertisment -
Google search engine

Most Popular