Monday, April 27, 2026
Google search engine

Homeರಾಜ್ಯರಾಜ್ಯದಲ್ಲಿ ಐದುದಿನಗಳ ಕಾಲ ಬಿಸಿಗಾಳಿಯ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಐದುದಿನಗಳ ಕಾಲ ಬಿಸಿಗಾಳಿಯ ಯೆಲ್ಲೋ ಅಲರ್ಟ್

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತೀವ್ರತೆಯು ಹೆಚ್ಚಾಗುತ್ತಿದ್ದು, ಹವಾಮಾನ ಇಲಾಖೆಯು ಮುಂದಿನ ಐದು ದಿನಗಳ ಕಾಲ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಬಿಸಿಗಾಳಿಯ ಯೆಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಿದೆ.

ಎ.27ರಿಂದ ಮೇ 1ರವರೆಗೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಧ್ಯಾಹ್ನದ ವೇಳೆಗೆ ಆಕಾಶವು ಭಾಗಶಃ ಮೋಡ ಕವಿದ ವಾತಾವರಣವನ್ನು ಹೊಂದಿದ್ದು, ಗರಿಷ್ಠ ತಾಪಮಾನವು 36 ಡಿಗ್ರಿ ಸೆಲ್ಸಿಯಸ್ ತಲುಪಲಿದೆ. ಕರಾವಳಿ ಕರ್ನಾಟಕದ ಕಾರವಾರ, ಮಂಗಳೂರು, ಉತ್ತರ ಒಳನಾಡಿನ ಬೀದರ್ ಮತ್ತು ಹಾವೇರಿ ಮತ್ತು ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ ಮತ್ತು ಮೈಸೂರಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ವಿಜಯಪುರದಲ್ಲಿ ಗಮನಾರ್ಹ ಏರಿಕೆ ಕಂಡುಬರಲಿದೆ. ರಾಜ್ಯದ ಉಳಿದ ಸ್ಥಳಗಳಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಯಾಗದೆ 34 ಡಿಗ್ರಿ ಸೆಲ್ಸಿಯಸ್ ನಿಂದ 41 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ.

RELATED ARTICLES
- Advertisment -
Google search engine

Most Popular