Monday, April 27, 2026
Google search engine

Homeರಾಜ್ಯಸುದ್ದಿಜಾಲಯಾವುದೇ ಲೋಪ ಉಂಟಾಗದಂತೆ ಪರೀಕ್ಷೆ ಪಾರದರ್ಶಕವಾಗಿ ನಡೆಸಿ- ಜಿಲ್ಲಾಧಿಕಾರಿ ಡಾ.ಕುಮಾರ

ಯಾವುದೇ ಲೋಪ ಉಂಟಾಗದಂತೆ ಪರೀಕ್ಷೆ ಪಾರದರ್ಶಕವಾಗಿ ನಡೆಸಿ- ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ:  ಏಪ್ರಿಲ್ 30 ರಿಂದ ಮೇ 13 ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು ಬೆಳಿಗ್ಗೆ 10 ಗಂಟೆಯಿಂದ 1 ಗಂಟೆಯವರೆಗೆ ಹಾಗೂ 13 ರಂದು ಬೆಳಿಗ್ಗೆ 10 ಗಂಟೆ ಯಿಂದ 1 ಗಂಟೆ ಹಾಗೂ ಮಧ್ಯಾಹ್ನ 2 ಗಂಟೆ ಗಂಟೆಯಿಂದ 4.15 ಗಂಟೆಯವರೆಗೆ ನಡೆಯಲಿದ್ದು ಪರೀಕ್ಷೆಯಲ್ಲಿ ಯಾವುದೇ ಲೋಪ ಉಂಟಾಗದಂತೆ ಪಾರದರ್ಶಕವಾಗಿ ನಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪಿಯುಸಿ ಪೂರಕ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸುವ ಕುರಿತು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸದರಿ ವರ್ಷದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು 2877 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ ಎಂದು ಹೇಳಿದರು.

ಜಿಲ್ಲೆಯಲ್ಲಿ 07 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಸಮಯದಲ್ಲಿ ಪರೀಕ್ಷಾ ಕೇಂದ್ರ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್ ಹಾಗೂ ಸೈಬರ್ ಕೇಂದ್ರಗಳನ್ನು ಮುಚ್ಚಲಾಗುವುದು. ಜಿಲ್ಲಾ ಖಜಾನೆಯಿಂದ  ಪ್ರಶ್ನಾ ಪತ್ರಿಕೆಯನ್ನು ಸಾಗಿಸುವಾಗ ಬಿಗಿ ಭದ್ರತೆಯನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ಪ್ರಶ್ನಾ ಪತ್ರಿಕೆ ಸಾಗುವ 7 ಮಾರ್ಗದಲ್ಲಿ ರೂಟ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರಶ್ನಾ ಪತ್ರಿಕೆ ಸಾಗಿಸುವ ವಾಹನಗಳಲ್ಲಿಗೆ  ಕಡ್ಡಾಯವಾಗಿ ಜಿ.ಪಿ.ಎಸ್ ಅಳವಡಿಸಿರಬೇಕು. ಜಿಲ್ಲಾಧಿಕಾರಿ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ನಡೆಯಲಿದ್ದು ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.

ಸಿಸಿಟಿವಿ ಕಣ್ಗಾವಲು

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಯಲಿದ್ದು ಕ್ಯಾಮೆರಾಗಳನ್ನು ಪರೀಕ್ಷಾ ಕೊಠಡಿಗಳಿಗೆ ಈಗಾಗಲೇ ಅಳವಡಿಸಲಾಗಿದೆ. 7 ಪರೀಕ್ಷಾ ಕೇಂದ್ರ ಕೊಠಡಿಯಲ್ಲಿ ಸಿಸಿಟಿವಿ ಕಡ್ಡಾಯವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಪರೀಕ್ಷೆ ಸಮಯದಲ್ಲಿ ಸಿಸಿಟಿವಿಗಳಲ್ಲಿ ತಾಂತ್ರಿಕ ದೋಷ ಉಂಟಾಗುತ್ತದೆ ಕ್ರಮ ವಹಿಸಬೇಕು. ಪರೀಕ್ಷೆ ನಡೆಯುವ ಸಮಯದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿ

ಕುಡಿಯುವ ನೀರು, ಸೂಕ್ತ ಆಸನ ವ್ಯವಸ್ಥೆ ಹಾಗೂ ಪರೀಕ್ಷಾ ಕೊಠಡಿಯಲ್ಲಿ ಗಡಿಯಾರದ ಜೊತೆಗೆ ಮೂಲ ಭೂತ ಸೌಕರ್ಯಗಳನ್ನು ಕಲ್ಪಿಸಿ.  ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿ, ಪೊಲೀಸ್ ಬಂದೋಬಸ್ತ್ ಹಾಗೂ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು. ಗ್ರಾಮೀಣ ಭಾಗದಿಂದ ಮಕ್ಕಳು ಬರುವುದರಿಂದ ಬಸ್ ಗಳು ಪರೀಕ್ಷಾ ದಿನದಂದು ವಿಳಂಬವಾಗದಂತೆ ಕ್ರಮ ವಹಿಸಿ ಎಂದು ಹೇಳಿದರು.

ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಹಾಗೂ ಸ್ಮಾರ್ಟ್ ಡಿವೈಸ್ ಗಳನ್ನು ಕೊಠಡಿಗೆ ತರಲು ಬೀಡಬೇಡಿ. ಪರೀಕ್ಷೆ ಮೇಲ್ವಿಚಾರಣೆಗೆ ನೇಮಿಸಿರುವ ಶಿಕ್ಷಕರು ಮಾರ್ಗ ಸೂಚಿಗೆ ಬದ್ಧರಾಗಿ ಕರ್ತವ್ಯ ಪಾಲಿಸಬೇಕು.  ಪರೀಕ್ಷೆ ನಡೆಯುವ ಸಂದರ್ಭದಲ್ಲಿ  ಚಿತ್ರೀಕರಣ ಮಾಡಲು ಯಾರಿಗೂ ಅನುಮತಿ ನೀಡಬಾರದು  ಎಂದು ಹೇಳಿದರು.

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ ಚಲುವಯ್ಯ,ಆರ್. ಸಿ. ಹೆಚ್ ಅಧಿಕಾರಿ ಕೆ. ಪಿ.ಅಶ್ವಥ್, ನಗರ ಸಭೆಯ ಪರಿಸರ ಅಭಿಯಂತರರು ರುದ್ರೇಗೌಡ,ಜಿಲ್ಲಾ ಖಜಾನೆಯ ಉಪ ನಿರ್ದೇಶಕರಾದ ವರಲಕ್ಷ್ಮಿ, ಕುಟುಂಬ ಕಲ್ಯಾಣಾಧಿಕಾರಿ ಬೆಟ್ಟಸ್ವಾಮಿ, ವಿವಿಧ ಕಾಲೇಜಿನ ಪ್ರಾಂಶುಪಾಲರು  ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular