ನವದೆಹಲಿ: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮತ್ತೆ ಸದ್ದು ಮಾಡುತ್ತಿದ್ದು ಇದೀಗ ಸಿಎಂ ಸಿದ್ದರಾಮಯ್ಯನವರ ಆಪ್ತರೆಂದೇ ಬಿಂಬಿತವಾಗಿರುವ ಸಚಿವರಾದ ಹೆಚ್.ಸಿ ಮಹದೇವಪ್ಪ ಮತ್ತು ಸತೀಶ್ ಜಾರಕಿಹೊಳಿ ಅವರು ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ದೆಹಲಿಯ ನಿವಾಸದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಸಚಿವರಾದ ಹೆಚ್.ಸಿ ಮಹದೇವಪ್ಪ ಮತ್ತು ಸತೀಶ್ ಜಾರಕಿಹೊಳಿ ಭೇಟಿಯಾಗಿ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಮಾಜಿ ಸಂಸದ ಡಿಕೆ ಸುರೇಶ್ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರ ಭೇಟಿ ಮಾಡಿದ ಬೆನ್ನಲ್ಲೆ ಇದೀಗ ಸಿಎಂ ಆಪ್ತರು ಒಬ್ಬೊಬ್ಬರೇ ನಾಯಕರನ್ನ ಭೇಟಿಯಾಗಿ ಚರ್ಚಿಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.



