Tuesday, April 28, 2026
Google search engine

Homeಅಪರಾಧಕುಡಿದ ಮತ್ತಲ್ಲಿ ಕಲ್ಲಿಂದ ಜಜ್ಜಿ ತಮ್ಮನನ್ನೇ ಕೊಂದ ಅಣ್ಣ!

ಕುಡಿದ ಮತ್ತಲ್ಲಿ ಕಲ್ಲಿಂದ ಜಜ್ಜಿ ತಮ್ಮನನ್ನೇ ಕೊಂದ ಅಣ್ಣ!

ತುಮಕೂರು: ಕ್ಷುಲ್ಲಕ ವಿಚಾರಕ್ಕೆ ಒಡಹುಟ್ಟಿದ ತಮ್ಮನನ್ನೇ ಸ್ವಂತ ಅಣ್ಣ ಕೊಲೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಮಧುಗಿರಿ ತಾಲೂಕಿನ ನಿಟ್ಟರಹಳ್ಳಿ ನಿವಾಸಿ ಗಂಗರಾಜು ಸಾವನ್ನಪ್ಪಿದ್ದಾನೆ. ಇನ್ನೂ ಕೊಲೆ ಮಾಡಿದ ಆರೋಪಿ ನರಸಿಂಹಮೂರ್ತಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಗಂಗರಾಜು ಸಹೋದರರರಿಗೆ ಅಪ್ಪ-ಅಮ್ಮ ಇರಲಿಲ್ಲ. ಹೀಗಾಗಿ ಅಜ್ಜಿಯ ಆಶ್ರಯದಲ್ಲಿಯೇ ಇವರು ಬೆಳೆದಿದ್ದರು. ಓದು ತಲೆಗೆ ಹತ್ತದಿದ್ದರೂ ಕುಡಿತದ ಚಟ ಮಾತ್ರ ಮೈಗಂಟಿತ್ತು. ಮದುವೆ ಬಳಿಕ ಗಂಗರಾಜು ಅಣ್ಣಂದಿರು ಬೇರೆ ಮನೆ ಮಾಡಿಕೊಂಡು ವಾಸವಿದ್ದರೆ, ಈತ ಮಾತ್ರ ಅಜ್ಜಿಯ ಜೊತೆ ಇದ್ದ. ಈ ನಡುವೆ ನಿನ್ನೆ ಸಂಜೆ ವೇಳೆಗೆ ಮನೆಯಲ್ಲಿದ್ ಗಂಗರಾಜು ಬಾರ್​​ಗೆ ತೆರಳಿ ಕುಡಿದು ಬಂದಿದ್ದಾನೆ. ಇದೇ ವೇಳೆ ಸಹೋದರ ನರಸಿಂಹಮೂರ್ತಿ ಸಹ ಕುಡಿದ ಮತ್ತಿನಲ್ಲಿ ಮನೆಗೆ ಬಂದಿದ್ದಾನೆ. ಈ ವೇಳೆ ಅಣ್ಣ-ತಮ್ಮನ ನಡುವೆ ಹಣದ ವಿಚಾರ ಸಂಬಂಧ ಗಲಾಟೆ ಶುರುವಾಗಿದೆ. ಆ ಜಗಳ ವಿಕೋಪಕ್ಕೆ ತೆರಳಿ ಇಬ್ಬರೂ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.ಬಳಿಕ ಗಂಗರಾಜು ಕೆಳಗೆ ಬಿದ್ದಿದ್ದಾನೆ. ಇದನ್ನ ಗಮನಿಸಿದ ಅಣ್ಣ ಆತನಿಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ. ಮೃತ ಗಂಗರಾಜು ಅವಿವಾಹಿತ ಎಂಬುದು ಕೂಡ ಗೊತ್ತಾಗಿದೆ.

ಪ್ರಕರಣ ಸಂಬಂಧ ಕೊಡಿಗೇನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಗಂಗರಾಜುವಿನ ಮತ್ತೋರ್ವ ಸಹೋದರ ನೀಡಿರುವ ದೂರಿನ ಅನ್ವಯ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಕುಡಿದ ಮತ್ತಿನಲ್ಲಿ ನಡೆದ ಜಗಳದಲ್ಲಿ ತಮ್ಮನ ಕೊಂದ ಅಣ್ಣನನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತಿದ್ದಾರೆ.

RELATED ARTICLES
- Advertisment -
Google search engine

Most Popular