Wednesday, April 29, 2026
Google search engine

Homeಸಿನಿಮಾಯಶ್‌ ನಟನೆಯ ‘ಟಾಕ್ಸಿಕ್’ ಚಿತ್ರ ಬಿಡುಗಡೆ ಮುಂದೂಡಿಕೆ !

ಯಶ್‌ ನಟನೆಯ ‘ಟಾಕ್ಸಿಕ್’ ಚಿತ್ರ ಬಿಡುಗಡೆ ಮುಂದೂಡಿಕೆ !

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಟಿಸುತ್ತಿರುವ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯ ಈ ಹಿಂದೆ ಘೋಷಿಸಲಾಗಿದ್ದ ಜೂನ್ 4 ತೆರೆಗೆ ಬರುತ್ತಿಲ್ಲ ಎಂದು ಸ್ವತಃ ಯಶ್ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

ಈ ಸಿನಿಮಾಗೆ ಸಿಕ್ಕ ಅಭೂತಪೂರ್ವ ಸ್ಪಂದನೆಯಿಂದಾಗಿ ಚಿತ್ರವನ್ನು ಜಾಗತಿಕ ಮಟ್ಟದಲ್ಲಿ ದೊಡ್ಡ ಮಟ್ಟಕ್ಕೆ ಬಿಡುಗಡೆ ಮಾಡಲು ಯಶ್ ಈ ಹೊಸ ಹೆಜ್ಜೆ ಇಟ್ಟಿದ್ದಾರೆ. ಒಬ್ಬ ನಟ ಮತ್ತು ನಿರ್ಮಾಪಕನಾಗಿ ತಮಗಿರುವ ಜವಾಬ್ದಾರಿಯನ್ನು ನೆನಪಿಸಿರುವ ರಾಕಿಂಗ್ ಸ್ಟಾರ್ ಯಶ್, ‘ಟಾಕ್ಸಿಕ್’ ಸಿನಿಮಾವನ್ನು ಪರಿಪೂರ್ಣವಾಗಿ ಜಾಗತಿಕ ವೇದಿಕೆಯಲ್ಲಿ ಪ್ರಸ್ತುತಪಡಿಸಲು ಸಮಯ ಕೇಳಿದ್ದಾರೆ.

ಸಿನಿಮಾ ಈಗಾಗಲೇ ಪೂರ್ಣಗೊಂಡಿದ್ದರೂ, ಅದನ್ನು ಕೇವಲ ಭಾರತಕ್ಕೆ ಸೀಮಿತಗೊಳಿಸದೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸಿನಿಮಾವನ್ನ ಬಿಡುಗಡೆಗೊಳಿಸಲು ಚಿತ್ರ ತಂಡ ಸಜ್ಜಾಗುತ್ತಿದೆ. ಸಿನೆಮಾಕಾನ್‌ನಲ್ಲಿ ಸಿಕ್ಕ ಭರ್ಜರಿ ಪ್ರತಿಕ್ರಿಯೆಯಿಂದ ಪ್ರೇರಿತರಾಗಿರುವ ಯಶ್ ಮತ್ತು ತಂಡ, ಜಾಗತಿಕ ವಿತರಣೆ ಮತ್ತು ಪಾಲುದಾರಿಕೆಗಾಗಿ ಬಿಡುಗಡೆಯನ್ನು ಮುಂದೂಡಿದ್ದಾರೆ.

ಭಾರತೀಯ ಚಿತ್ರರಂಗ ಇಂದು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಒಬ್ಬ ನಟ ಮತ್ತು ನಿರ್ಮಾಪಕನಾಗಿ ನಮ್ಮ ಸಿನಿಮಾ ಪ್ರಪಂಚದಾದ್ಯಂತ ತಲುಪುವಂತೆ ಮಾಡುವುದು ನನ್ನ ಜವಾಬ್ದಾರಿ. ಇದಕ್ಕಾಗಿ ಸ್ವಲ್ಪ ಸಮಯದ ಅವಶ್ಯಕತೆಯಿದೆ. ನಿಮ್ಮ ತಾಳ್ಮೆ ಮತ್ತು ಬೆಂಬಲ ಹೀಗೆಯೇ ಇರಲಿ ಎಂದು ಯಶ್ ಅಭಿಮಾನಿಗಳಲ್ಲಿ ವಿನಂತಿಸಿದ್ದಾರೆ.

ಸದ್ಯಕ್ಕೆ ಹೊಸ ಬಿಡುಗಡೆಯ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿಲ್ಲ. ಆದರೆ, ಜಾಗತಿಕ ಮಟ್ಟದಲ್ಲಿ ಎಲ್ಲವೂ ಸಿದ್ಧವಾದ ನಂತರ ಹೊಸ ದಿನಾಂಕವನ್ನು ಶೀಘ್ರದಲ್ಲೇ ತಿಳಿಸುವುದಾಗಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

RELATED ARTICLES
- Advertisment -
Google search engine

Most Popular