ಹನೂರು : ಕರ್ನಾಟಕ ಲ್ಯಾಂಪ್ಸ್ ಸಹಕಾರ ಮಹಾಮಂಡಲ ಸಂಘದ ನೂತನ ಅಧ್ಯಕ್ಷರಾಗಿ ಕೊಡಗು ಅರುಣ್ ರಾವ್ ಮತ್ತು ಉಪಾಧ್ಯಕ್ಷರಾಗಿ ದಿನ್ನಳ್ಳಿ ಸತ್ಯಮಂಗಲ ಸಿದ್ದಮರಿಗೌಡರು ಆಯ್ಕೆಯಾಗಲು ಕಾರಣರಾದ ಹನೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮತ್ತು ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಆರ್. ನರೇಂದ್ರ ರಾಜುಗೌಡ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಪಟ್ಟಣದ ಮಾಜಿ ಶಾಸಕರ ನಿವಾಸದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಆಗಮಿಸಿ ಮಾಜಿ ಶಾಸಕ ನರೇಂದ್ರ ಅವರಿಗೆ ಶಾಲು, ಹಾರ ಹಾಕುವ ಮೂಲಕ ಸನ್ಮಾನಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಆರ್ ನರೇಂದ್ರ, ಹನೂರು ತಾಲ್ಲೂಕಿನಿಂದ ಮೊದಲ ಬಾರಿಗೆ ರಾಜ್ಯ ಮಟ್ಟದ ಲ್ಯಾಂಪ್ಸ್ ಸಹಕಾರ ಸಂಘದಲ್ಲಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಂತಸ ತಂದಿದೆ. ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಬುಡಕಟ್ಟು ಜನರನ್ನು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡುವ ಮೂಲಕ ಲ್ಯಾಂಪ್ಸ್ ಸಂಘವನ್ನು ಏಳಿಗೆಗೆ ಶ್ರಮಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಹನೂರು ತಾಲ್ಲೂಕು ಲ್ಯಾಂಪ್ಸ್ ಉಪಾಧ್ಯಕ್ಷ ಚಂದ್ರು, ನಿರ್ದೇಶಕ ಮಹದೇವ, ಕಾರ್ಯದರ್ಶಿ ದೊಡ್ಡವೀರಶೆಟ್ಟಿ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ವಕೀಲ ಅಶೋಕ್ ಹಾಗೂ ಇತರರು ಇದ್ದರು



