Saturday, May 2, 2026
Google search engine

Homeಸ್ಥಳೀಯತುಮಕೂರಿನಲ್ಲಿ ಹಕ್ಕಿಜ್ವರ ಭೀತಿ : ನವಿಲು ಬಳಿಕ ಕೋಳಿಗಳ ಸಾವು

ತುಮಕೂರಿನಲ್ಲಿ ಹಕ್ಕಿಜ್ವರ ಭೀತಿ : ನವಿಲು ಬಳಿಕ ಕೋಳಿಗಳ ಸಾವು

ತುಮಕೂರು : ತುಮಕೂರಿನಲ್ಲಿ ಹಕ್ಕಿಜ್ವರದ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ ಕೆಲವು ದಿನಗಳಿಂದ ವರದಿಯಾಗಿದ್ದ ನವಿಲುಗಳ ಸರಣಿ ಸಾವುಗಳ ಬೆನ್ನಲ್ಲೇ ಇದೀಗ ಅದೇ ವ್ಯಾಪ್ತಿಯಲ್ಲಿ ಕೋಳಿಗಳ ಸಾವೂ ಸಂಭವಿಸಿದ್ದು, ಇದು ಆತಂಕ ಹೆಚ್ಚಾಗುವಂತೆ ಮಾಡಿದೆ.

ಸಾವನ್ನಪ್ಪಿದ ಕೋಳಿಗಳ ಮಾದರಿಗಳನ್ನು ಪರೀಕ್ಷೆಗಾಗಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದ್ದು, ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಲು ಪರಿಶೀಲನೆ ನಡೆಯುತ್ತಿದೆ.

ಹಕ್ಕಿ ಜ್ವರವೇ 44 ನವಿಲುಗಳ ಸಾವಿಗೆ ಕಾರಣ ಎಂದು ಈಗಾಗಲೇ ದೃಢಪಟ್ಟಿದ್ದು, ಈಗ ಕೋಳಿಗಳ ಸಾವಿಗೂ ಅದೇ ಕಾರಣವಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಕಳೆದ ಏಪ್ರಿಲ್ 16ರಿಂದ ತುಮಕೂರು ತಾಲೂಕಿನಾದ್ಯಂತ ನವಿಲುಗಳ ಸರಣಿ ಸಾವು ಆರಂಭವಾಗಿತ್ತು. ಕೇವಲ 11 ದಿನಗಳಲ್ಲಿ ಬರೋಬ್ಬರಿ 44 ನವಿಲುಗಳು ಮೃತಪಟ್ಟಿದ್ದವು. ಆರಂಭದಲ್ಲಿ ಜಿಲ್ಲೆಯಲ್ಲಿ ತಾಪಮಾನ ಏರುತ್ತಿದ್ದ ಕಾರಣ, ಅತಿಯಾದ ಶಾಖ ಮತ್ತು ನಿರ್ಜಲೀಕರಣದಿಂದ ಈ ಸಾವುಗಳು ಸಂಭವಿಸಿರಬಹುದು ಎಂದು ಶಂಕಿಸಲಾಗಿತ್ತು. ಆದರೆ, FSL ವರದಿಯಲ್ಲಿ ಹಕ್ಕಿ ಜ್ವರದ ಸೋಂಕಿನಿಂದಲೇ ನವಿಲುಗಳು ಸಾವನ್ನಪ್ಪಿವೆ ಎಂದು ದೃಢಪಟ್ಟಿದೆ.

ಇದೀಗ ಜಿಲ್ಲೆಯ ಬೊಮ್ಮನಹಳ್ಳಿ ಗ್ರಾಮದ ಕೋಳಿ ಫಾರಂನಲ್ಲಿ ಏಕಾಕಾಲದಲ್ಲಿ ಸುಮಾರು 30 ಕೋಳಿಗಳು ಸಾವನ್ನಪ್ಪಿದ್ದು, ಈ ಘಟನೆ ಹಕ್ಕಿಜ್ವರದ ಅನುಮಾನಕ್ಕೆ ಕಾರಣವಾಗಿದೆ. ಏತನ್ಮಧ್ಯೆ ಪಶು ಸಂಗೋಪನಾ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಹೈ ಅಲರ್ಟ್‌ ಘೋಷಿಸಿದ್ದಾರೆ.

RELATED ARTICLES
- Advertisment -
Google search engine

Most Popular