Sunday, May 3, 2026
Google search engine

Homeಸ್ಥಳೀಯಪಾದಚಾರಿಗಳಿಗೆ ಕಾರು ಡಿಕ್ಕಿ : ಗಂಭೀರ

ಪಾದಚಾರಿಗಳಿಗೆ ಕಾರು ಡಿಕ್ಕಿ : ಗಂಭೀರ

ಮಂಡ್ಯ : ‌ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ರಸ್ತೆ ದಾಟುತ್ತಿದ್ದವರಿಗೆ ಕಾರು ಡಿಕ್ಕಿಯಾದ ಪರಿಣಾಮ ಇಬ್ಬರ ಸ್ಥಿತಿ ಚಿಂತಾಜನಕವಾದ ಘಟನೆ ಮಂಡ್ಯ ತಾಲೂಕಿನ ಕಾಳೇನಹಳ್ಳಿ ಬಳಿ ನಡೆದಿದೆ.

ಮೈಸೂರಿನಿಂದ ಬೆಂಗಳೂರಿನ ಕಡೆ ತೆರಳುತ್ತಿದ್ದ ಡಸ್ಟರ್ ಕಾರೊಂದು ಅತಿ ವೇಗವಾಗಿ ಕಾಳೇನಹಳ್ಳಿ ಬಳಿ ರಸ್ತೆ ದಾಟುತ್ತಿದ್ದ ಇಬ್ಬರು ಪಾದಾಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಾಯಗೊಂಡ ಇಬ್ಬರೂ ರಕ್ತದ ಮಡುವಿನಲ್ಲಿ ನರಳಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಏರ್ ಬ್ಯಾಗ್ ಓಪನ್ ಆಗಿದ್ದ ಕಾರಣ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.

RELATED ARTICLES
- Advertisment -
Google search engine

Most Popular