Wednesday, May 6, 2026
Google search engine

Homeವಿದೇಶಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳಿಗೆ ಅಮೆರಿಕದ ಭದ್ರತೆ ಸ್ಥಗಿತ : 'ಪ್ರಾಜೆಕ್ಟ್ ಫ್ರೀಡಂ' ನಿಲ್ಲಿಸಿದ ಟ್ರಂಪ್

ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳಿಗೆ ಅಮೆರಿಕದ ಭದ್ರತೆ ಸ್ಥಗಿತ : ‘ಪ್ರಾಜೆಕ್ಟ್ ಫ್ರೀಡಂ’ ನಿಲ್ಲಿಸಿದ ಟ್ರಂಪ್

ವಾಷಿಂಗ್ಟನ್ :‌ ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷವನ್ನು ಕೊನೆಗಾಣಿಸುವ ಮಾತುಕತೆಗಳು ಅಂತಿಮ ಹಂತಕ್ಕೆ ತಲುಪಿರುವ ಬೆನ್ನಲ್ಲೇ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದ್ದಾರೆ. ಮಧ್ಯಪ್ರಾಚ್ಯದ ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳಿಗೆ ಭದ್ರತೆ ನೀಡುತ್ತಿದ್ದ ‘ಪ್ರಾಜೆಕ್ಟ್ ಫ್ರೀಡಂ’ (Project Freedom) ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಅವರು ಘೋಷಿಸಿದ್ದಾರೆ.

ಹಾಗಾದರೆ ಟ್ರಂಪ್ ಹೇಳಿದ್ದೇನು?

ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ‘ಟ್ರುತ್ ಸೋಶಿಯಲ್’ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಟ್ರಂಪ್ ಇರಾನ್ ಪ್ರತಿನಿಧಿಗಳೊಂದಿಗೆ ಶಾಂತಿ ಒಪ್ಪಂದದ ಮಾತುಕತೆಗಳು ಸಕಾರಾತ್ಮಕವಾಗಿ ಸಾಗುತ್ತಿವೆ. ಪಾಕಿಸ್ತಾನ ಮತ್ತು ಇತರ ರಾಷ್ಟ್ರಗಳ ಮನವಿಯ ಮೇರೆಗೆ ಹಾಗೂ ಇರಾನ್ ವಿರುದ್ಧದ ಮಿಲಿಟರಿ ಯಶಸ್ಸನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇರಾನ್ ಬಂದರುಗಳ ಮೇಲಿನ ಅಮೆರಿಕದ ದಿಗ್ಬಂಧನ (Blockade) ಮುಂದುವರಿಯಲಿದೆ, ಆದರೆ ‘ಪ್ರಾಜೆಕ್ಟ್ ಫ್ರೀಡಂ’ ಅನ್ನು ಮಾತ್ರ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಈ ಒಪ್ಪಂದವು ಅಂತಿಮಗೊಳ್ಳುತ್ತದೆಯೇ ಎಂದು ನೋಡಲು ಈ ಸಮಯವನ್ನು ಬಳಸಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಏನಿದು ‘ಪ್ರಾಜೆಕ್ಟ್ ಫ್ರೀಡಂ’?

ಇದು ಟ್ರಂಪ್ ಆಡಳಿತವು ಪ್ರಾರಂಭಿಸಿದ ಒಂದು ಬೃಹತ್ ಮಿಲಿಟರಿ ಕಾರ್ಯಾಚರಣೆಯಾಗಿದೆ. ಇದರ ಪ್ರಮುಖ ಅಂಶ ಏನೆಂದರೆ ಇರಾನ್ ಜೊತೆಗಿನ ಉದ್ವಿಗ್ನತೆಯ ನಡುವೆ ಹಾರ್ಮುಜ್ ಜಲಸಂಧಿಯಲ್ಲಿ ಅಂತರಾಷ್ಟ್ರೀಯ ವಾಣಿಜ್ಯ ಹಡಗುಗಳ ಸಂಚಾರವನ್ನು ಸುರಕ್ಷಿತವಾಗಿರಿಸುವುದು. ಇತ್ತೀಚಿನ ವಾರಗಳಲ್ಲಿ ಇರಾನ್ ಹಡಗುಗಳ ಮೇಲೆ ದಾಳಿ ನಡೆಸುತ್ತಿದೆ ಎಂದು ಅಮೆರಿಕ ಆರೋಪಿಸಿತ್ತು. ಈ ಮಿಷನ್‌ಗಾಗಿ ಅಮೆರಿಕ 15,000 ಕ್ಕೂ ಹೆಚ್ಚು ಸೈನಿಕರು, ಗೈಡೆಡ್-ಮಿಸೈಲ್ ಡಿಸ್ಟ್ರಾಯರ್ ಹಡಗುಗಳು, ಹೆಲಿಕಾಪ್ಟರ್‌ಗಳು ಮತ್ತು 100 ಕ್ಕೂ ಹೆಚ್ಚು ವಿಮಾನಗಳನ್ನು ನಿಯೋಜಿಸಿತ್ತು.

ವಿಶ್ವದ ಒಟ್ಟು ತೈಲ ಪೂರೈಕೆಯ ಸುಮಾರು ಐದನೇ ಒಂದು ಭಾಗ (1/5th) ಹೊರ್ಮುಜ್ ಜಲಸಂಧಿಯ ಮೂಲಕವೇ ಹಾದುಹೋಗುತ್ತದೆ. ಆದ್ದರಿಂದ ಈ ಮಾರ್ಗದ ಭದ್ರತೆಯು ಜಾಗತಿಕ ಆರ್ಥಿಕತೆಗೆ ಅತ್ಯಂತ ನಿರ್ಣಾಯಕವಾಗಿದೆ.‌ (ಏಜೆನ್ಸಿಸ್‌)

RELATED ARTICLES
- Advertisment -
Google search engine

Most Popular