ಬೆಂಗಳೂರು : ವೇತನ ಪರಿಷ್ಕರಣೆಗೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿದ್ದ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ನೀಡಿದ್ದು ಶೇ.12.5 ರಷ್ಟು ಸಂಬಳ ಹೆಚ್ಚಳ ಮಾಡಿ ಆದೇಶಿಸಿದೆ.
ನಾಲ್ಕು ಸಾರಿಗೆ ನಿಗಮಗಳ ನೌಕರರ ಮೂಲ ವೇತನದಲ್ಲಿ ಶೇಕಡಾ 12.5 ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 2025 ಏಪ್ರಿಲ್ 1 ರಿಂದ ವೇತನ ಪರಿಷ್ಕರಣೆ ಅನ್ವಯ ಆಗಲಿದೆ. ಸಾರಿಗೆ ನೌಕರರು ಶೇ 25 ರಷ್ಟು ವೇತನ ಹೆಚ್ಚಳಕ್ಕೆ ಬೇಡಿಕೆಯಿಟ್ಟಿದ್ದರು.
ಕಳೆದ ಕೆಲವು ವರ್ಷಗಳಿಂದ ಸಾರಿಗೆ ನೌಕರರು ವೇತನ ಹೆಚ್ಚಳಕ್ಕಾಗಿ ನಿರಂತರವಾಗಿ ಒತ್ತಾಯಿಸಿ ಪ್ರತಿಭಟಿಸಿದ್ದರು. ನೌಕರರ ಸಂಘಟನೆಗಳ ಜೊತೆ ನಡೆಸಿದ ಸುದೀರ್ಘ ಚರ್ಚೆ ಹಾಗೂ ಆರ್ಥಿಕ ಇಲಾಖೆಯ ಸಮ್ಮತಿಯ ನಂತರ, ಸಾರಿಗೆ ಸಚಿವರು ಮತ್ತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಈ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.



