Wednesday, May 13, 2026
Google search engine

Homeರಾಜ್ಯಸುದ್ದಿಜಾಲನಾಳೆ ಎನ್.ಚಲುವರಾಯಸ್ವಾಮಿ ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ

ನಾಳೆ ಎನ್.ಚಲುವರಾಯಸ್ವಾಮಿ ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ

ಮಂಡ್ಯ: ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿರವರು (ನಾಳೆ) ಮೇ 13 ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಮೇ 13 ರಂದು ರಂದು ಮಧ್ಯಾಹ್ನ 1.30 ಗಂಟೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್) ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯಕ್ತ ಆಶ್ರಯದಲ್ಲಿ ಮಂಡ್ಯ ಜಿಲ್ಲಾ ಆಸ್ಪತ್ರೆಯಲ್ಲಿ ನೂತನವಾಗಿ ಸ್ಥಾಪಿಸಿರುವ ಮಿಡ್ ವೈಫರಿ ಆಧಾರಿತ ಆರೈಕೆ ಘಟಕ (MLCU) ಮತ್ತು ತಾಯಿ ಹಾಲು ಸಂಗ್ರಹಣಾ ಕೇಂದ್ರ (ಶಿಶು ಸಂಜೀವಿನಿ) (MILK BANK) ಘಟಕಗಳ ಉದ್ಘಾಟನಾ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮೇ 13 ರಂದು ಮಧ್ಯಾಹ್ನ 2.30 ಗಂಟೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಮಂಡ್ಯ ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ನೌಕರರ ದಿನಾಚರಣೆ ಕಾರ್ಯಕ್ರಮ ಹಾಗೂ ನಾಗರೀಕ ಸೇವಾ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 4.30 ಗಂಟೆಗೆ ಮಂಡ್ಯ ರಸ್ತೆ ಮೂಲಕ ಕೇಂದ್ರ ಸ್ಥಾನ ಬೆಂಗಳೂರು ತಲುಪಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular