ಬೆಂಗಳೂರು: ಎಂಬಿಎ ಹಾಗೂ ಎಂಸಿಎ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯಬೇಕಿದ್ದ ಪಿಜಿಸಿಇಟಿ ಪರೀಕ್ಷೆಯನ್ನು ಮೇ 24ರಿಂದ ಜೂನ್ 14ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಮೇ 24ರಂದು ಯುಪಿಎಸ್‌ಸಿ ಪರೀಕ್ಷೆ ಇರುವ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಮೇ 23ರಂದು ಎಂ.ಟೆಕ್/ಎಂಬಿಎ ಹಾಗೂ ಡಿಸಿಇಟಿ ಪರೀಕ್ಷೆಗಳು ನಿಗದಿಯಂತೆ ನಡೆಯಲಿವೆ.



