Monday, May 25, 2026
Google search engine

Homeರಾಜ್ಯಸುದ್ದಿಜಾಲಬಲಮುರಿ ಪ್ರವಾಸಿಗರ ಸುರಕ್ಷತೆಗೆ ಹೆಚ್ಚು ಆದ್ಯತೆಗೆ ಕ್ರಮ ವಹಿಸಬೇಕು- ಡಾ ಕುಮಾರ

ಬಲಮುರಿ ಪ್ರವಾಸಿಗರ ಸುರಕ್ಷತೆಗೆ ಹೆಚ್ಚು ಆದ್ಯತೆಗೆ ಕ್ರಮ ವಹಿಸಬೇಕು- ಡಾ ಕುಮಾರ

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿ ಪ್ರವಾಸಿ ತಾಣಗಳಲ್ಲಿ ಕಾವೇರಿ ನದಿಗೆ ಇಳಿದು ಹಲವರು ಪ್ರಾಣ ಕಳೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬಲಮುರಿ ಪ್ರವಾಸಿಗರ ಸುರಕ್ಷತೆಗೆ ಹೆಚ್ಚು ಆದ್ಯತೆಗೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿ ಪ್ರವಾಸಿ ತಾಣಗಳಲ್ಲಿ ಕಾವೇರಿ ನದಿಗೆ ಇಳಿದು ಹಲವರು ಪ್ರಾಣ ಕಳೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಸಂಬಂಧ ಸಭೆ ನಡೆಸಿ ಮಾತನಾಡಿದರು.

ಪ್ರವಾಸಿಗರ ಸುರಕ್ಷತೆಗೆ ಹೆಚ್ಚು ಆದ್ಯತೆಗೆ ಪೊಲೀಸ್ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ಕಾವೇರಿ ನೀರಾವರಿ ನಿಗಮದಿಂದ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು.

ಬಲಮುರಿ ಮತ್ತು ಸುತ್ತಮುತ್ತಲಿನ ಅಪಾಯಕಾರಿ ಸ್ಥಳಗಳಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿಗೆ ಇಳಿಯುವುದನ್ನು ಮತ್ತು ಈಜುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಹಾಗೂ ಸುರಕ್ಷತೆ ಇಲ್ಲದ ತೆಪ್ಪ ಬಳಸುವುದು ನಿಷೇಧಿಸಿದೆ ಎಂದು ಅವರು ತಿಳಿಸಿದರು.

ಪ್ರವಾಸೋದ್ಯಮ ಇಲಾಖೆ, ಕಾವೇರಿ ನೀರಾವರಿ ನಿಗಮ, ತಾಲ್ಲೂಕು ತಹಶೀಲ್ದಾರ್ ಹಾಗೂ ಪೊಲೀಸ್ ಇನ್ ಸ್ಪೆಕ್ಟರ್ ಸೇರಿದಂತೆ ಸಮಿತಿ ರಚಿಸಲಾಗಿದೆ.

ಎಚ್ಚರಿಕೆ ಫಲಕಗಳ ಅಳವಡಿಕೆ ನದಿಯ ನೀರಿನ ತೀವ್ರತೆ ಹಾಗೂ ನೀರಿನ ಆಳದ ಅರಿವಿಲ್ಲದೆ ಪ್ರವಾಸಿಗರು ಪ್ರಾಣ ಕಳೆದುಕೊಳ್ಳುತ್ತಿರುವುದರಿಂದ, ನದಿ ಪಾತ್ರದ ಅಪಾಯಕಾರಿ ವಲಯಗಳಲ್ಲಿ ದೊಡ್ಡದಾದ ಎಚ್ಚರಿಕೆ ಮತ್ತು ಸೂಚನಾ ಫಲಕಗಳನ್ನು ಪ್ರದರ್ಶಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.

ಪ್ರವಾಸಿಗರಲಿ ಸ್ಧಳ ಬಗ್ಗೆ ಮಾರ್ಗದರ್ಶನ ನೀಡಲು ಹೋಂ ಗಾರ್ಡ್ ನೇಮಕ ಮಾಡಬೇಕು. ಸಿಸಿ ಕ್ಯಾಮೆರಾ ಅಳವಡಿಸಬೇಕು ಹಾಗೂ ಧ್ವನಿ ವರ್ಧಕ ಮೂಲಕ ಪ್ರವಾಸಿಗರಿಗೆ ಮಾಹಿತಿ ನೀಡಬೇಕು ಎಂದು ಅವರು ತಿಳಿಸಿದರು.

ನದಿಯ ಆಳ ಹಾಗೂ ಸುಳಿಗಳಿರುವ ಅಪಾಯಕಾರಿ ಜಾಗಗಳ ಬಳಿ ಯಾರಾದರೂ ಪ್ರವಾಸಿಗರು ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಸ್ಥಳೀಯ ರೈತರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಶೋಭಾರಾಣಿ ಮಾತನಾಡಿ ನದಿಯ ತಟದಲ್ಲಿ ಪ್ರವಾಸಿಗರಿಗೆ ಎಚ್ಚರಿಕೆ ನೀಡಲು ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಬೇಕು ಹಾಗೂ ಬಲಮುರಿಯಿಂದ ಪೊಲೀಸರು ನಿರಂತರ ನಿಗಾವಹಿಸುತ್ತಾರೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ರಾಘವೇಂದ್ರ, ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರಾದ ವೆಂಕಟರಮಣಪ್ಪ ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಧಿತರಿದ್ದರು.

RELATED ARTICLES
- Advertisment -
Google search engine

Most Popular