Tuesday, June 2, 2026
Google search engine

Homeರಾಜಕೀಯಬಿಜೆಪಿ ತೊರೆಯಲಿದ್ದಾರಾ ಅಣ್ಣಾಮಲೈ?ರಾಜಕೀಯ ವಲಯದಲ್ಲಿ ಚರ್ಚೆ

ಬಿಜೆಪಿ ತೊರೆಯಲಿದ್ದಾರಾ ಅಣ್ಣಾಮಲೈ?ರಾಜಕೀಯ ವಲಯದಲ್ಲಿ ಚರ್ಚೆ

ಚೆನ್ನೈ: ಕರ್ನಾಟಕ ಕೇಡರ್‌ನ ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಬಿಜೆಪಿಯನ್ನು ತೊರೆಯುವ ಸಾಧ್ಯತೆ ಇದೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಮೂಲಗಳನ್ನು ಉಲ್ಲೇಖಿಸಿ ವರದಿಯೊಂದು ಪ್ರಕಟವಾಗಿದೆ.

ಮಂಗಳವಾರ ದೆಹಲಿಗೆ ತೆರಳಲಿರುವ ಅಣ್ಣಾಮಲೈ, ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಹಾಗೂ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಕಳೆದ ಆರು ವರ್ಷಗಳಲ್ಲಿ ಪಕ್ಷ ನೀಡಿದ ಅವಕಾಶಗಳಿಗೆ ಕೃತಜ್ಞತೆ ಸಲ್ಲಿಸುವ ಜೊತೆಗೆ ತಮ್ಮ ಮುಂದಿನ ರಾಜಕೀಯ ಹೆಜ್ಜೆಗಳ ಕುರಿತು ಚರ್ಚಿಸುವ ನಿರೀಕ್ಷೆಯಿದೆ.

ಮೂಲಗಳ ಪ್ರಕಾರ, ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಜೊತೆಗಿನ ಮೈತ್ರಿ ಹಾಗೂ ಸೀಟು ಹಂಚಿಕೆ ವಿಚಾರದಲ್ಲಿ ಬಿಜೆಪಿ ನಾಯಕತ್ವದ ನಿರ್ಧಾರಗಳ ಬಗ್ಗೆ ಅಣ್ಣಾಮಲೈ ಅಸಮಾಧಾನ ಹೊಂದಿದ್ದರು ಎನ್ನಲಾಗಿದೆ. ಇದರಿಂದ ಅವರ ರಾಜಕೀಯ ಭವಿಷ್ಯದ ಕುರಿತು ಊಹಾಪೋಹಗಳು ಹೆಚ್ಚಾಗಿವೆ.

2026ರ ಚುನಾವಣೆಯ ಬಳಿಕ ತಮಿಳುನಾಡಿನ ರಾಜಕೀಯ ಚಿತ್ರಣ ಬದಲಾಗಿದ್ದು, ಯುವ ಮತದಾರರು ತಮ್ಮ ಭಾಷೆ ಮತ್ತು ಸಮಸ್ಯೆಗಳನ್ನು ಪ್ರತಿನಿಧಿಸುವ ನಾಯಕರತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ ಎಂಬ ಅಭಿಪ್ರಾಯವನ್ನು ಅಣ್ಣಾಮಲೈ ಹೊಂದಿದ್ದಾರೆ ಎಂದು ವರದಿಯಾಗಿದೆ. ಆದರೆ ಅವರು ತಕ್ಷಣವೇ ಹೊಸ ರಾಜಕೀಯ ಪಕ್ಷ ಸ್ಥಾಪಿಸುವ ಸಾಧ್ಯತೆ ಕಡಿಮೆ ಎಂದು ಹೇಳಲಾಗಿದ್ದು, ತಮ್ಮ ಬೆಂಬಲಿಗರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಮುಂದಿನ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.

RELATED ARTICLES
- Advertisment -
Google search engine

Most Popular