Thursday, June 4, 2026
Google search engine

Homeರಾಜಕೀಯಯಾವುದೇ ಒತ್ತಡಕ್ಕೆ ಮಣಿಯದೇ ಪಾರದರ್ಶಕವಾಗಿ ಕೆಲಸ ಮಾಡಿ- ಸಿಎಂ ಡಿಕೆಶಿ ಖಡಕ್ ಸೂಚನೆ

ಯಾವುದೇ ಒತ್ತಡಕ್ಕೆ ಮಣಿಯದೇ ಪಾರದರ್ಶಕವಾಗಿ ಕೆಲಸ ಮಾಡಿ- ಸಿಎಂ ಡಿಕೆಶಿ ಖಡಕ್ ಸೂಚನೆ

ಬೆಂಗಳೂರು:  ಯಾವುದೇ ಒತ್ತಡಕ್ಕೆ ಮಣಿಯದೇ ಪಾರದರ್ಶಕವಾಗಿ ಜನರ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ನೀಡಿದರು.

ಇಂದು ವಿಧಾನಸೌಧಲ್ಲಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಅಧಿಕಾರಿಗಳಿಂದ ಉತ್ತಮ ಕೆಲಸದ ನಿರೀಕ್ಷೆ ಹೊಂದಿದ್ದೇನೆ.  ನಮ್ಮ ಸರ್ಕಾರದಲ್ಲಿ ಜಾತಿ ಧರ್ಮ ಸೇರಿ ಯಾವುದೇ ಪ್ರಭಾವ ನಡೆಯಲ್ಲ ಪಾರದರ್ಶಕವಾಗಿ ಕೆಲಸ ಮಾಡಲು ಸೂಚನೆ ನೀಡಿದ್ದೇನೆ.  15ದಿನಗಳಲ್ಲಿ ಆ್ಯಕ್ಷನ್‍ ಕಾರ್ಡ್ ಸಿದ್ದಕ್ಕೆ ಸೂಚನೆ ನೀಡಿದ್ದೇನೆ. ಆತ್ಮಸಾಕ್ಷಿಗೆ ಅನುಗುಣವಾಗಿ ಒತ್ತಡಕ್ಕೆ ಮಣಿಯದೇ ಕೆಲಸ ಮಾಡಿ.  ನಮ್ಮ ಶಾಸಕರು ಸಚಿವರು ಸೇರಿದಂತೆ ಯಾವುದೇ ಒತ್ತಡ ಬಂದರೂ ಅದಕ್ಕೆ ಮಣಿಯದೇ ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು.  ತಾಲ್ಲೂಕು ಗ್ರಾಮಗಳಿಗೆ ತೆರಳಿ ಕೆಲಸ ಮಾಡಬೇಕು ಎಲ್ಲಾ ಇಲಾಖೆಗಳಲ್ಲಿ  ಬಾಕಿ ಇರುವ ಕೆಲಸದ ಪಟ್ಟಿಯನ್ನು 25 ದಿನಗಳೊಳಗೆ ನೀಡುವಂತೆ ಸೂಚಿಸಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು.

RELATED ARTICLES
- Advertisment -
Google search engine

Most Popular