Friday, June 5, 2026
Google search engine

Homeರಾಜಕೀಯರಾಮಲಿಂಗಾರೆಡ್ಡಿ ರಾಜೀನಾಮೆ : ಕರ್ನಾಟಕ ಕಾಂಗ್ರೆಸ್‌ನಲ್ಲಿ ಬಿರುಕು : ರಾಹುಲ್ ಗಾಂಧಿ ಖಡಕ್ ಸೂಚನೆ

ರಾಮಲಿಂಗಾರೆಡ್ಡಿ ರಾಜೀನಾಮೆ : ಕರ್ನಾಟಕ ಕಾಂಗ್ರೆಸ್‌ನಲ್ಲಿ ಬಿರುಕು : ರಾಹುಲ್ ಗಾಂಧಿ ಖಡಕ್ ಸೂಚನೆ

ಬೆಂಗಳೂರು : ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಖಾತೆ ಹಂಚಿಕೆ ವಿಷಯದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸರ್ಕಾರ ರಚನೆ ಆದ ಮೂರೇ ದಿನದಲ್ಲಿ ಮೊದಲ ವಿಕೆಟ್​ ಪತನವಾಗಿದೆ. ಖಾತೆ ಹಂಚಿಕೆ ವಿಚಾರವಾಗಿ ರಾಮಲಿಂಗಾರೆಡ್ಡಿ ಅಸಮಾಧಾನಗೊಂಡಿದ್ದು ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಕೆ.ಹೆಚ್​​ ಮುನಿಯಪ್ಪ ಕೂಡ ಅಸಮಾಧಾನ ಹೊರಹಾಕಿದ್ದಾರೆ. ಇದು ಸದ್ಯ ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ತೋರಿಸುತ್ತಿದೆ.

ಇನ್ನು ರಾಜ್ಯ ಕಾಂಗ್ರೆಸ್ ನಲ್ಲಿ ಸಚಿವರು ಅಸಾಧಾನಗೊಂಡಿರುವ ವಿಚಾರ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ಗಮನಕ್ಕೆ ತರಲಾಗಿದೆ. ಈ ಬಗ್ಗೆ ರಾಜ್ಯ ಕಾಂಗ್ರೆಸ್​​ ಉಸ್ತುವಾರಿ ರಣದೀಪ್​​ ಸುರ್ಜೆವಾಲಾಗೆ ರಾಹುಲ್​ ಗಾಂಧಿಗೆ ಮಾಹಿತಿ ನೀಡಿದರು. ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿರುವ ರಾಹುಲ್ ಗಾಂಧಿ, ಮನವೊಲಿಸಿ, ಮನವೊಲಿಕೆಗೆ ಬಗ್ಗದಿದ್ದರೆ ರಾಜೀನಾಮೆ ಅಂಗೀಕರಿಸಿ ಎಂದು ಕಡ್ಡಿಮುರಿದಂತೆ ರಾಜ್ಯ ನಾಯಕರಿಗೆ ಖಡಕ್ ಸೂಚನೆ ನೀಡಿದ್ದಾರೆ.

ಇನ್ನು ರಾಮಲಿಂಗಾರೆಡ್ಡಿ ರಾಜಿನಾಮೆ ನೀಡಿದ ಬಳಿಕ ಯಾರ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಅಸಮಾಧಾನ ತಣಿಸಲು ಸಿಎಂ ಡಿಕೆ ಶಿವಕುಮಾರ್​ ಅವರು ರಾಮಲಿಂಗಾರೆಡ್ಡಿ ಸಂಪರ್ಕಕ್ಕೆ ಪ್ರಯತ್ನಿಸಿದ್ದು ಆದರೆ ರಾಮಲಿಂಗಾರೆಡ್ಡಿ ಮೊಬೈಲ್​ ಸ್ವಿಚ್​ ಆಫ್ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ರಾಮಲಿಂಗಾರೆಡ್ಡಿ ಬೆಂಗಳೂರು ನಗರಾಭಿವೃದ್ಧಿ ಖಾತೆಗಾಗಿ ಪಟ್ಟು ಹಿಡಿದಿದ್ದರು.

RELATED ARTICLES
- Advertisment -
Google search engine

Most Popular