Monday, June 8, 2026
Google search engine

Homeರಾಜ್ಯಅಭಿವೃದ್ಧಿ ಕಾಮಗಾರಿಗಳಿಗೆ ವೇಗ: ಅಧಿಕಾರಿಗಳಿಗೆ ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ

ಅಭಿವೃದ್ಧಿ ಕಾಮಗಾರಿಗಳಿಗೆ ವೇಗ: ಅಧಿಕಾರಿಗಳಿಗೆ ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳು ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಶೀಘ್ರ ಹಾಗೂ ಪರಿಣಾಮಕಾರಿ ಸೇವೆಗಳನ್ನು ಒದಗಿಸಬೇಕು ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಮಗ್ರ ಪರಿಶೀಲನಾ ಸಭೆಯಲ್ಲಿ ಸಚಿವರು ಇಲಾಖೆಯ ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಕಾಮಗಾರಿಗಳ ಪ್ರಗತಿ ಕುರಿತು ಅವಲೋಕನ ನಡೆಸಿದರು. ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು, ನಾಗರಿಕರಿಗೆ ಒದಗಿಸಲಾಗುತ್ತಿರುವ ಮೂಲಭೂತ ಸೌಲಭ್ಯಗಳು ಹಾಗೂ ಬಾಕಿ ಉಳಿದಿರುವ ಯೋಜನೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಯೋಜನೆಗಳ ಅನುಷ್ಠಾನದಲ್ಲಿ ಗುಣಮಟ್ಟ ಮತ್ತು ಪಾರದರ್ಶಕತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದ ಸಚಿವರು, ಸಾರ್ವಜನಿಕರ ನಿರೀಕ್ಷೆಗಳಿಗೆ ತಕ್ಕಂತೆ ಸೇವೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಇಲಾಖೆಯ ಎಲ್ಲ ಅಭಿವೃದ್ಧಿ ಕಾರ್ಯಗಳು ಸಮನ್ವಯದಿಂದ ಮತ್ತು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

RELATED ARTICLES
- Advertisment -
Google search engine

Most Popular